ಕಾಂಗ್ರೆಸ್-ಜೆಡಿಎಸ್ ನಡುವೆ ಭಿನ್ನಮತ..!! ರೇವಣ್ಣ ಕೊಟ್ರು ಸುಳಿವು..?

08 Jan 2019 12:17 PM | Politics
467 Report

ರಾಜಕೀಯ ವಲಯದಲ್ಲಿ ಒಬ್ಬರಿಗೆ ಮತ್ತೊಬ್ಬರು ಟಾಂಗ್ ಕೊಡುವುದು ಕಾಮನ್ …ಇದೀಗ ನಮ್ಮನ್ನು ಕೇಳದಿದ್ದರೆ ನಮ್ಮ ದಾರಿ ನಮಗೆ, ಅವರ ದಾರಿ ಅವರಿಗೆ' ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರು ಮಿತ್ರಪಕ್ಷ ಕಾಂಗ್ರೆಸ್ಸಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ ಎನ್ನಲಾಗುತ್ತಿದೆ.. ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಿಗಮ-ಮಂಡಳಿ ನೇಮಕದ ಬಗ್ಗೆ ಕಾಂಗ್ರೆಸ್‌ ಮುಖಂಡರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ವರಿಷ್ಠರಾದ ದೇವೇಗೌಡರ ಬಳಿ ಮಾತನಾಡಿಕೊಳ್ಳಲಿ. ನಾನು ನನ್ನ ಜಿಲ್ಲೆ ಬಿಟ್ಟು ಯಾವ ಜಿಲ್ಲೆಗೂ ಕೈಹಾಕುವುದಿಲ್ಲ ಎಂದು ಸ್ಪಷ್ಟ ಪಡಿಸಿದರು..

ಈಗಾಗಲೇ ನಮ್ಮ ಹಾಸನ ಜಿಲ್ಲೆಯಲ್ಲಿ ಆರು ಮಂದಿ ಜೆಡಿಎಸ್‌ ಶಾಸಕರು ಇದ್ದಾರೆ. ಕಾಂಗ್ರೆಸ್‌ನವರು ನಿಗಮ-ಮಂಡಳಿ ನೇಮಕದಲ್ಲಿ ನಮ್ಮ ಜಿಲ್ಲೆಯ ವಿಚಾರ ಬಂದರೆ ಕಡ್ಡಾಯವಾಗಿ ನಮ್ಮನ್ನು ಕೇಳಲೇಬೇಕು. ನಮ್ಮನ್ನು ಕೇಳದಿದ್ದರೆ ಅವರ ದಾರಿಯನ್ನು ಅವರು ನೋಡಿಕೊಳ್ಳಲಿ ಎಂದು ನೇರವಾಗಿಯೇ ತಿಳಿಸಿದರು.. ಅಷ್ಟೆ ಅಲ್ಲದೆ  ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಡಾ. ಸುಧಾಕರ್‌ ವಿರುದ್ಧ ಗರಂ ಆದ ರೇವಣ್ಣ, ಸುಧಾಕರ್‌ ಅವರು ನಮ್ಮ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಮಾತನಾಡಲು ಅವರು ಯಾರು ಎಂದು ಖಾರವಾಗಿ ಕೇಳಿದರು. ಒಟ್ಟಾರೆ ಮಿತ್ರ ಪಕ್ಷಗಳ ನಡುವೆಯೇ ಜಟಾಪಟಿ ಆಗುತ್ತಿರುವುದಂತೂ ಸುಳ್ಳಲ್ಲ..

Edited By

Manjula M

Reported By

Manjula M

Comments