ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರ್ ಸ್ವಾಮಿಗೆ ಫಿಕ್ಸ್ ಆಯ್ತು ಅಖಾಡ..!!

10 Jan 2019 4:01 PM | Politics
3431 Report

ಮುಂಬರುವ ಲೋಕಸಭಾ ಚುನಾವಣೆಗೆ ಯಾರು ಯಾವ ಕ್ಷೇತ್ರದಿಂದ ನಿಂತು ಕೊಳ್ಳುತ್ತಾರೆ ಎಂಬ ಗೊಂದಲಗಳು ಸಾಕಷ್ಟಿವೆ.. ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಟ, ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನು ಕಣಕ್ಕೆ ಇಳಿಸುವಂತೆ ಸ್ಥಳೀಯ ಜೆಡಿಎಸ್ ನಾಯಕರುಗಳು ಪಕ್ಷದ ಹೈಕಮಾಂಡ್ ಅನ್ನು ಒತ್ತಾಯವನ್ನು ಇಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ., ಇದರ ಮೂಲಕ ದೊಡ್ಡ ಗೌಡರ ಕುಟುಂಬದಿಂದ ಮತ್ತೊಬ್ಬರು ರಾಜಕೀಯಕ್ಕೆ ಎಂಟ್ರಿಯಾಗುವುದು ಬಹುತೇಕ ನಿಶ್ಚಿತವಾಗುವುದು ಎಂದು ಹೇಳಲಾಗುತ್ತಿದೆ.

ಮಂಡ್ಯದಲ್ಲಿ ಜೆಡಿಎಸ್ ಜಿಲ್ಲಾ ಪಂಚಾಯತ್ ಸದಸ್ಯರ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ಸಮಯದಲ್ಲಿ ಮಂಡ್ಯ ಜೆಡಿಎಸ್’ನ ಭದ್ರಕೋಟೆಯಾಗಿದ್ದು ಅವರು ಕ್ಷೇತ್ರದ ಜನತೆ ಜೊತೆಗೆ ಯಾವಾಗಲು ಸಂಪರ್ಕ ಹೊಂದಿದ್ದಾರೆ ಹೀಗಾಗಿ ಅವರನ್ನೇ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಜೆಡಿಎಸ್ ನಿಂದ ಲೋಕಸಭಾ ಚುನಾವಣೆಗೆ ನಿಖಿಲ್ ಕು‍ಮಾರ್ ಸ್ವಾಮಿಯವರನ್ನ ಅಖಾಡಕ್ಕೆ ಇಳಿಸುವ ಬಗ್ಗೆ ಈಗಾಗಲೇ ನಾವುಗಳು ಎಚ್.ಡಿ.ದೇವೇಗೌಡ, ಎಚ್.ಡಿ‌.ಕುಮಾರಸ್ವಾಮಿ, ಎಚ್.ವಿಶ್ವನಾಥ್ ರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.. ಸಧ್ಯ ಸ್ಯಾಂಡಲ್ ವುಡ್ ನಲ್ಲಿ ಮಿಂಚುತ್ತಿರುವ ನಿಖಿಲ್ ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

Edited By

Manjula M

Reported By

Manjula M

Comments