ಲೋಕಸಭಾ ಚುನಾವಣೆಯ ಅಖಾಡದಲ್ಲಿ 'ದೋಸ್ತಿ'ಗಳ ಸೀಟು ಹಂಚಿಕೆ 'ಫೈನಲ್': ಜೆಡಿಎಸ್ ಗೆ ಸಿಕ್ಕಿ ಜಿಲ್ಲೆ ಎಷ್ಟು ಗೊತ್ತಾ..?

29 Jan 2019 9:33 AM | Politics
13110 Report

ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷದವರು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಲೋಕಸಭಾ ಚುನಾವಣೆಗೂ ಹೊಂದಾಣಿಕೆ ಮಾಡಿಕೊಂಡು ಕಣಕ್ಕೆ ಇಳಿಯಲು ನಿರ್ಧಾರ ಮಾಡಿವೆ.  ಇದಕ್ಕೆ ಪೂರಕವಾಗಿ ಕ್ಷೇತ್ರಗಳ ಹಂಚಿಕೆ ಬಹುತೇಕ ಪೂರ್ಣಗೊಂಡಿದೆ ಎಂದು ಹೇಳಲಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದರೆ ಜೆಡಿಎಸ್ ಅಭ್ಯರ್ಥಿಗಳು 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಸ್ಥಳೀಯ ಕಾರ್ಯಕರ್ತರ ವಿರೋಧದ ನಡುವೆಯೂ ಹಾಸನ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ಕಾಂಗ್ರೆಸ್ ನಾಯಕರು ಸಮ್ಮತಿಸಿದ್ದಾರೆಂದು ತಿಳಿದು ಬಂದಿದೆ. ಜೆಡಿಎಸ್ ಅಭ್ಯರ್ಥಿಗಳು ಮಂಡ್ಯ, ಮೈಸೂರು, ಹಾಸನ, ಬೆಂಗಳೂರು ಉತ್ತರ, ಶಿವಮೊಗ್ಗ, ಬೀದರ್, ವಿಜಯಪುರ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆಂದು ಹೇಳಲಾಗಿದ್ದು, ಈ ಎಂಟು ಕ್ಷೇತ್ರಗಳ ಪೈಕಿ ರಾಯಚೂರಿನಲ್ಲಿ ಮಾತ್ರ ಕಾಂಗ್ರೆಸ್ ಸಂಸದರಿದ್ದಾರೆ. ಹೀಗಾಗಿ ರಾಯಚೂರು ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಸ್ಪರ್ಧೆಗೆ ಕಾಂಗ್ರೆಸ್ ಕೇಳಲಿದ್ದು, ಒಂದೊಮ್ಮೆ ಜೆಡಿಎಸ್ ಪಟ್ಟು ಹಿಡಿದರೆ ಬಿಟ್ಟುಕೊಡಲು ತೀರ್ಮಾನಿಸಿದೆ ಎನ್ನಲಾಗಿದೆ. ಈ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.  ಒಟ್ಟಾರೆಯಾಗಿ ಲೋಕಸಭಾ ಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿರುವುದಂತು ಸುಳ್ಳಲ್ಲ…

Edited By

Manjula M

Reported By

Manjula M

Comments