ತೆರಿಗೆ ವಿನಾಯಿತಿ ಮಿತಿ 2.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ..!! ವೈಯುಕ್ತಿಕ ತೆರಿಗೆದಾರರಿಗೆ ಬಂಪರ್ ಗಿಫ್ಟ್.!!!

01 Feb 2019 1:20 PM | Politics
715 Report

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವರಾದ ಪಿಯೂಷ್ ಗೋಯೆಲ್ ಮಂಡಿಸಿದ್ದಾರೆ.. ಇಂದು 2018-19ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಅನ್ನು ಹಂಗಾಮಿ ವಿತ್ತ ಸಚಿವರಾದ ಪಿಯೂಷ್ ಗೋಯಲ್ ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕೆಲವೊಂದು ಭರ್ಜರಿ ಆಫರ್’ಗಳನ್ನು ಕೊಡಲಾಗಿದೆ.  ಆದಾಯ ತೆರಿಗೆ ಮಿತಿಯನ್ನು 2.5 ಲಕ್ಷದಿಂದ 5 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆಯನ್ನು ಮಾಡಲಾಗಿದೆ .

ಮೊದಲು ತೆರಿಗೆ ಮಿತಿ 2.5 ಲಕ್ಷ ಇತ್ತು… ತೆರಿಗೆ ಮಿತಿಯನ್ನು 2.5ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಳ ಮಾಡಿರುವುದಾಗಿ ಘೋಷಿಸಿದಾಗ ಕಲಾಪದಲ್ಲಿ ಸದಸ್ಯರು ಮೇಜು ಕುಟ್ಟಿ  ಆ ಘೋಷಣೆಯನ್ನು ಸ್ವಾಗತಿಸಿದರು. ಅಷ್ಟೇ ಅಲ್ಲ ಉಳಿತಾಯ ಯೋಜನೆಗಳ ಮೂಲಕ 1.5 ಲಕ್ಷದವರೆಗೆ ಹೂಡಿಕೆಗೆ ಅವಕಾಶ ಇದೆ. ಗೃಹ ಸಾಲ 2 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಿಸಿದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಈಗಿನ  2.5 ಲಕ್ಷದಿಂದ 5 ಲಕ್ಷಕ್ಕೆ ಏರಿಸಬೇಕು ಎನ್ನುವ ಆಸೆಗೆ ಕೇಂದ್ರ ಸರಕಾರ ಬಜೆಟ್ ನಲ್ಲಿ ಅಸ್ತು ಎಂದಿದೆ. ಕೇಂದ್ರ ಸರಕಾರದ ಈ ಹೊಸ ಘೋಷಣೆಯಿಂದಾಗಿ 3 ಕೋಟಿಗೂ ಹೆಚ್ಚು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲಿದೆ. ಈ ಬಜೆಟ್’ನಿಂದ ಮದ್ಯಮವರ್ಗದವರು ನಿಟ್ಟುಸಿರು ಬಿಡುವಂತಾಗಿದೆ..

Edited By

Manjula M

Reported By

Manjula M

Comments