ಲೋಕಸಭಾ ಚುನಾವಣೆ  ಜೆಡಿಎಸ್‌ ಪಾಲಾದ ಐದು ಕ್ಷೇತ್ರಗಳು..!! ಯಾವುವು ಗೊತ್ತಾ..?

05 Feb 2019 10:25 AM | Politics
12392 Report

ಈಗಾಗಲೇ ಮುಂಬರುವ ಲೋಕಸಭೆ ಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.. ಒಂದು ಕಡೆ ದೋಸ್ತಿ ಸರ್ಕಾರ ಅಖಾಡಕ್ಕೆ ಯಾರನ್ನು ಇಳಿಸಬೇಕು, ಯಾರನ್ನು ಇಳಿಸಬಾರದು ಎಂಬ ಚಿಂತನೆಯಲ್ಲಿದೆ.. ಜೆಡಿಎಸ್‌ಗೆ ಹೆಚ್ಚು ಎಂದರೆ  5 ಕ್ಷೇತ್ರಗಳನ್ನು ಮಾತ್ರ ಬಿಟ್ಟುಕೊಡಬಹುದು ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಹೇಳಿದ್ದಾರೆ. ಇತ್ತೀಚೆಗೆ ದೆಹಲಿಗೆ ಆಗಮಿಸಿದ್ದ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌ ಜೊತೆ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದರು.

ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗದ ಜೊತೆಗೆ ಮತ್ತೊಂದು ಸೀಟು ಕೊಡಲು ನಾವು ಒಪ್ಪಬಹುದು. ಅದನ್ನು ಬಿಟ್ಟು ಯಾವುದೇ ಕಾರಣಕ್ಕೂ ಹೆಚ್ಚು ಕೊಡಬಾರದು. ಇದರಿಂದ ಉಪಯೋಗವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಸಾಮಾನ್ಯವಾಗಿ ಜೆಡಿಎಸ್‌ಗೆ 5 ಕ್ಷೇತ್ರಗಳನ್ನು ಮಾತ್ರ ಬಿಟ್ಟುಕೊಡಬಹುದು. ಅದಕ್ಕೂ ಹೆಚ್ಚು ಬೇಕೆಂದರೆ ಸೀಟು ಹಂಚಿಕೆ ಮಾಡಿಕೊಳ್ಳುವುದರಲ್ಲಿ ಯಾವುದೆ ಅರ್ಥವಿಲ್ಲ. ಇನ್ನು, ದೇವೇಗೌಡರನ್ನು ಯಾವುದೇ ಕಾರಣಕ್ಕೂ ಬೆಂಗಳೂರಿಗೆ ಬಿಟ್ಟುಕೊಳ್ಳುವುದು ಬೇಡ. ಅದು ಕಾಂಗ್ರೆಸ್‌ಗೆ ಒಳ್ಳೆಯದಲ್ಲ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ದೇವೇಗೌಡರು ಮೈಸೂರು ಕ್ಷೇತ್ರವನ್ನು ಕೇಳಬಹುದು. ಆದರೆ, ಇಲ್ಲಿಯವರೆಗೆ ಮೈಸೂರಿನಲ್ಲಿ ಜೆಡಿಎಸ್‌ ಎಂದೂ ಗೆದ್ದಿಲ್ಲ. ಕೊಡಲೇಬೇಕು ಎಂದಾದಲ್ಲಿ ಚಿಕ್ಕಬಳ್ಳಾಪುರ ಹಾಗೂ ತುಮಕೂರನ್ನು ಕೊಡಬಹುದು ಎಂದು ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ..ಫೈನಲ್ ಆಗಿ ಯಾರಿಗೆ ಯಾವ ಕ್ಷೇತ್ರಗಳು ಸಿಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments