ಕಾಂಗ್ರೆಸ್ ಸಂಸದರಿಗೆ 'ಬಿಗ್ ಶಾಕ್'..!!  ಜೆಡಿಎಸ್,ಗೆ ತೆಕ್ಕೆಗೆ ಸಿಗ್ತಾವ ಈ ಕ್ಷೇತ್ರಗಳು..!?

14 Feb 2019 9:46 AM | Politics
936 Report

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದಲೂ ವಿಪಕ್ಷಗಳು ಸರ್ಕಾರವನ್ನು ಉರುಳಿಸಲು ಶತ ಪ್ರಯತ್ನ ಮಾಡುತ್ತಿವೆ,..ಆದರೂ ಮುಂಬರುವ ಲೋಕಸಭಾ ಚುನಾವಣೆಗಾಗಿ ಮತ್ತೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುತ್ತಿವೆ.. ರಾಜ್ಯದಲ್ಲಿ ದೋಸ್ತಿ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್ ಹಾಗೂ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳುವುದು  ಬಹುತೇಕ ನಿಶ್ಚಿತವಾಗಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಆಗುವುದು ನಿಶ್ಚಿತವಾಗಿರುವುದರಿಂದ ಚುನಾವಣೆ ಲೆಕ್ಕಾಚಾರಗಳು ಬದಲಾಗುವ ಸಾಧ್ಯತೆ ಇದೆ. ಹಾಸನ ಮತ್ತು ಮಂಡ್ಯ ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಸದಸ್ಯರಿದ್ದು, ಈ 2 ಕ್ಷೇತ್ರಗಳ ಜೊತೆಗೆ ಹಳೆ ಮೈಸೂರು ಭಾಗದ 10 ಕ್ಷೇತ್ರಗಳನ್ನು ಬಿಟ್ಟುಕೊಡಲು ಜೆಡಿಎಸ್ ಬೇಡಿಕೆ ಇಟ್ಟಿದೆ. ಆದರೆ ಇದಕ್ಕೆ ಒಪ್ಪದ ಕಾಂಗ್ರೆಸ್, ಉತ್ತರ ಕರ್ನಾಟಕದಲ್ಲಿ 3 -4 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ತಿಳಿಸಿದೆ ಎನ್ನಲಾಗಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಹೇಳುವ ಪ್ರಕಾರ ಜೆಡಿಎಸ್’ಗೆ ಕೇತ್ರಗಳ ಸಂಖ್ಯೆ ಕಡಿಮೆಯಿವೆ.. ಕಾಂಗ್ರೆಸ್ ಸಂಸದರು ಅಸ್ತಿತ್ವದಲ್ಲಿರುವ ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಜೆಡಿಎಸ್ ಕೇಳಿದೆ ಆದರೆ ಇದಕ್ಕೆ ಕಾಂಗ್ರೆಸ್ ಒಪ್ಪಿಲ್ಲ ಎನ್ನಲಾಗಿದೆ.ಹಾಗಾಗಿ ಮೈತ್ರಿ ಸರ್ಕಾರದಲ್ಲಿ ಈ ವಿಷಯ ಭಾರೀ ಚರ್ಚೆಯಲ್ಲಿದೆ.. ಮುಂಬರುವ ಲೋಕಸಭಾ ಚುನಾವಣೆಯ ಅಧಿಕಾರದ ಗದ್ದುಗೆಯನ್ನು ಯಾರು ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments