ಯಡಿಯೂರಪ್ಪ ಸೇರಿ ನಾಲ್ವರ ಮೇಲೆ FIR ದಾಖಲು..!?

14 Feb 2019 2:55 PM | Politics
2346 Report

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ  ಬಾರೀ ಸಂಚಲನ ಮೂಡಿಸಿದ್ದ ಬಿಜೆಪಿ ಆಪರೇಷನ್‌ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಹೇಳಲಾಗುತ್ತಿದೆ.. ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಗುರುಮಿಠಕಲ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಪ್ರಕರಣವನ್ನು ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.

ಎಫ್‌ಐಆರ್ ನಲ್ಲಿ ಸದರಿ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಾಸಕ ಶಿವನಗೌಡ ನಾಯಕ್, ಶಾಸಕ ಪ್ರೀತಂಗೌಡ,ಮರಮಕಲ್ ವಿರುದ್ಧ ಭ್ರಷ್ಟಾಚಾರ ತಡೆಗಟ್ಟುವಿಕೆ ಐಪಿಸಿ ಸೆಕ್ಷನ್ 1860, ಯು/ಎಸ್ -120ಬಿ, 504, 34 ಕಲಂ ಕಾಯ್ದೆ ಅಡಿ ಎಫ್‌ಐಆರ್ ದಾಖಲಾಗಿದೆ.ಶರಣಗೌಡ ದೂರಿನ ಮೇರೆಗೆ ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಪರೇಷನ್ ಕಮಲ ಮಾಡುವುದಕ್ಕೆ ಹೋಗಿ ಬಿಜೆಪಿ ಮತ್ಯಾವ ತೊಂದರೆಗೆ ಸಿಲುಕಿ ಹಾಕಿಕೊಳ್ಳುತ್ತೊ ನೋಡಬೇಕಿದೆ.

Edited By

Manjula M

Reported By

Manjula M

Comments