ಲೋಕಸಭಾ ಚುನಾವಣೆಗೆ ಜೆಡಿಎಸ್ ಕೇಳಿದ್ದು 12 ಕ್ಷೇತ್ರ..!! ಸಿಕ್ಕಿದೆಷ್ಟು ಗೊತ್ತಾ..?

19 Feb 2019 10:33 AM | Politics
5408 Report

ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ.. ಆದರೆ ಜೆಡಿಎಸ್ ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು ಎಂಬುದೇ ಗೊಂದಲವಾಗಿ ಬಿಟ್ಟಿದೆ..ಲೋಕಸಭಾ ಚುನಾವಣೆಗೆ ಜೆಡಿಎಸ್ 12 ಸ್ಥಾನ ಕೇಳುತ್ತಿರಬಹುದು. ಆದರೆ, ಕಾಂಗ್ರೆಸ್ ಮಾತ್ರ ಏಳು ಸ್ಥಾನವನ್ನಷ್ಟೇ ಬಿಟ್ಟುಕೊಡಲು ಅಣಿಯಾಗಿದೆ. ಫೆ.18ರಂದು ನಡೆದ ಚುನಾವಣಾ ಸಮಿತಿ ಸಭೆಯಲ್ಲಿ ಇಂತಹದೊಂದು ಚರ್ಚೆಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಹಾಲಿ ಸಂಸದರ ಕ್ಷೇತ್ರಗಳನ್ನು ಸೀಟು ಹಂಚಿಕೆ ಚರ್ಚೆಗೆ ಹೊರ ತರಬಾರದು.. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹಾಲಿ ಗೆದ್ದಿರುವ 10 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡಬಾರದು ಎಂಬುದು ಕಾಂಗ್ರೆಸಿಗರ ವಾದ.. ಸೀಟು ಹಂಚಿಕೆ ಚರ್ಚೆ ಏನಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆಲ್ಲದ ಕ್ಷೇತ್ರಗಳಿಗೆ ಸೀಮಿತವಾಗಿರಬೇಕು ಎಂಬುದು ಸಭೆಯಲ್ಲಿ ಮಾತನಾಡಿದ ಬಹುತೇಕ ನಾಯಕರ ಅಭಿಮತವಾಗಿತ್ತು ಎಂದು ಮೂಲಗಳು ಹೇಳಿವೆ. ಜೆಡಿಎಸ್  ಪಕ್ಷವು ಬಹಿರಂಗವಾಗಿ 12 ಕ್ಷೇತ್ರಗಳಿಗೆ ಬೇಡಿಕೆಯಿಟ್ಟಿದ್ದರೂ 9 ಕ್ಷೇತ್ರಗಳಿಗೆ ಪಟ್ಟು ಹಿಡಿಯಲು ನಿರ್ಧರಿಸಿದೆ ಎನ್ನಲಾಗಿದೆ. ಆದರೆ, ಕಾಂಗ್ರೆಸ್ ಮಾತ್ರ ಏಳು ಸ್ಥಾನಗಳನ್ನು ಬಿಟ್ಟುಕೊಡಲು ಸಜ್ಜಾಗಿದೆ. ಹೀಗಾಗಿ ಉಳಿದ ಎರಡು ಕ್ಷೇತ್ರಗಳ ಚರ್ಚೆ ಮಾಡಬೇಕಿದೆ ಎಂದರು.. ಒಟ್ಟಾರೆಯಾಗಿ ರಾಜಕೀಯ ವಲಯದಲ್ಲಿ ಯಾವ ಸಮಯದಲ್ಲಿ ಏನು ಆಗುತ್ತದೆ ಎಂಬುದು ಗೊಂದಲದ ಗೂಡಾಗಿರುತ್ತದೆ.

Edited By

Manjula M

Reported By

Manjula M

Comments