ಪ್ರಜ್ವಲ್, ಸೂರಜ್, ನಿಖಿಲ್ ಯಾರಿಗೆ ಒಲಿಯಲಿದೆ ಲೋಕಸಭೆಯ ಟಿಕೆಟ್..!!?

25 Feb 2019 2:45 PM | Politics
454 Report

ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದೇ ಒಂದು ದೊಡ್ಡ ವಿಷಯವಾಗಿ ಬಿಟ್ಟಿದೆ… ಅದರಲ್ಲೂ ಜೆಡಿಎಸ್ ನಿಂದಾಗಿ ಯಾರು ಯಾವ ಕ್ಷೇತ್ರದಿಂದ ಅಖಾಡಕ್ಕೆ ಇಳಿಸಬೇಕು ಎನ್ನುವುದೇ ದೊಡ್ಡ ವಿಷಯವಾಗಿ ಬಿಟ್ಟಿದೆ.. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಮೂರನೇ ತಲೆಮಾರಿನವರಲ್ಲಿ ಯಾರು ಚುನಾವಣೆಯ ಅಖಾಡಕ್ಕೆ ಇಳಿಯಲಿದ್ದಾರೆಂಬ ಚರ್ಚೆಗಳು ಪ್ರಾರಂಭವಾಗಿವೆ... ಈಗಾಗಲೇ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಸಹ ಮಂಡ್ಯ ರಾಜಕಾರಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇವರಿಬ್ಬರ ನಡುವೆ ಮತ್ತೊಂದು ಹೆಸರು ಕೇಳಿ ಬರುತ್ತಿದೆ.. ಪ್ರಜ್ವಲ್ ರೇವಣ್ಣ ಹಾಸನದಿಂದ ಮತ್ತು ನಿಖಿಲ್ ಕುಮಾರ್ ಮಂಡ್ಯದಿಂದಲೇ ಸ್ಪರ್ಧೆ ಮಾಡ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಮಾತುಗಳಿಗೆ ಪೂರಕ ಎಂಬಂತೆ ದೇವೇಗೌಡರು ಸಹ ಹಾಸನದಿಂದ ಪ್ರಜ್ವಲ್ ಸ್ಪರ್ಧೆ ಎಂದು ಘೋಷಣೆಯನ್ನು ಕೂಡ ಮಾಡಿದ್ದರು. ಆದ್ರೆ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಮೈತ್ರಿ ಕಾಂಗ್ರೆಸ್ ಪಕ್ಷದ ನಾಯಕರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಿನ್ನೆಲೆಯಲ್ಲಿ ದೇವೇಗೌಡರು ತಾವೇ ಸ್ಪರ್ಧೆ ಮಾಡಬೇಕೆಂದು ತೀರ್ಮಾನಿಸಿದ್ದಾರಂತೆ. ಇತ್ತ ರೇವಣ್ಣ ಅವರ ಮತ್ತೋರ್ವ ಪುತ್ರ ಸೂರಜ್ ರೇವಣ್ಣರ ಹೆಸರು ಸಹ ಹರಿದಾಡುತ್ತಿದೆ. ಯಾರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments