ರಾಜಕೀಯದಲ್ಲಿ ಒಂಟಿಯಾದ ಸುಮಲತಾ ಅಂಬರೀಶ್’ಗೆ ಸಿಕ್ತು ಆನೆ ಬಲ..!!?

06 Mar 2019 10:03 AM | Politics
16037 Report

ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಒಳಗೊಳಗೆ ಒಳಜಗಳಗಳು ಕಿತ್ತಾಟಗಳು ಹೆಚ್ಚಾಗುತ್ತಿವೆ… ದಿನದಿಂದ ದಿನಕ್ಕೆ ಕಾವೇರುತ್ತಿರುವ ಮಂಡ್ಯ ಲೋಕಸಭಾ ಅಖಾಡ ರಂಗೇರುತ್ತಿದೆ… ಕೊನೆಯದಾಗಿ ನಿಖಿಲ್ ಮಂಡ್ಯ ಅಖಾಡ ಫಿಕ್ಸ್ ಆದ ಮೇಲೆ ಒಂದಿಷ್ಟು ಗೊಂದಲಗಳು ಸೃಷ್ಟಿಯಾಗಿವೆ…ಸುಮಲತಾ ಅಂಬರೀಶ್ ಗೆ ಕಾಂಗ್ರೆಸ್ ಟಿಕೇಟ್ ಕೊಡುವುದಿಲ್ಲ ಎಂದ ಮೇಲೆ ಕೆಲವು ನಾಯಕರು ಬೇಜಾರಾಗಿದ್ದು ಉಂಟು… ಹಾಗಾಗಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ನಿಂತುಕೊಳ್ಳಲು ತಿರ್ಮಾನಿಸಿದ್ದಾರೆ ಎನ್ನಲಾಗಿದೆ.

ಮೊದಲಿನಿಂದಲೂ ಜೆಡಿಎಸ್ ಅನ್ನು ವಿರೋಧಿಸಿಕೊಂಡೇ ಬಂದಿರುವ ಮಂಡ್ಯ ಕಾಂಗ್ರೆಸ್ ನಾಯಕರು ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡುವುದು ಬಹುತೇಕ ಪಕ್ಕಾ ಆಗಿದೆ. ಇನ್ನು ಅಂಬರೀಶ್ ಅವರೊಂದಿಗೆ ಆಪ್ತರಾಗಿದ್ದಂತಹ ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ಸಚಿವರು ಸುಮಲತಾ ಅವರಿಗೆ ಬೆಂಬಲ ನೀಡುವ ನಿರೀಕ್ಷೆ ಇದೆ.  ಕಾಂಗ್ರೆಸ್ ನಾಯಕರು, ಪಕ್ಷದ ಮುಖಂಡರಿಗೆ ಖಡಕ್ ವಾರ್ನಿಂಗ್ ನೀಡಿದ್ದು, ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಿದರೆ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ..ಕೇವಲ ಅಂಬರೀಶ್ ಅಭಿಮಾನಿಗಳು  ಮಾತ್ರವಲ್ಲದೆ ಸುಮಲತಾ ಅಂಬರೀಷ್ ಪಕ್ಷೇತರರಾಗಿ ಸ್ಪರ್ಧಿಸಿದರೆ ಬಿಜೆಪಿ ಬೆಂಬಲ ನೀಡುವ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ಯಾವ ಪಕ್ಷದಿಂದ ನಿಲ್ಲುತ್ತಾರೆ ಎಂಬುದು ಗೊತ್ತಿಲ್ಲ. ಪಕ್ಷೇತರರಾಗಿ ಸ್ಪರ್ಧಿಸುತ್ತಾರೆಯೇ ಎಂಬುದು ಗೊತ್ತಿಲ್ಲ. ಅವರು ಪಕ್ಷೇತರರಾಗಿ ಸ್ಪರ್ಧಿಸಿದಲ್ಲಿ ಬೆಂಬಲ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.. ಒಟ್ಟಾರೆಯಾಗಿ ಸುಮಲತಾ ಗೆಲುವಿಗಾಗಿ ತೆರೆಮೆರೆಯಲ್ಲಿ ಸಾಕಷ್ಟು ನಾಯಕರು ಶ್ರಮಿಸುತ್ತಿದ್ದಾರೆ..

Edited By

Manjula M

Reported By

Manjula M

Comments