ಯಾರ್ ಏನೇ ಹೇಳಿದರೂ ನನ್ನ ಫ್ಲ್ಯಾನ್ ಅಂತೆಯೇ ನಾನ್ ನಡೆಯೋದು..!!! ಪರೋಕ್ಷವಾಗಿ ಟಾಂಗ್ ಕೊಟ್ಟ ರೆಬಲ್ ಪತ್ನಿ..!!

11 Mar 2019 3:04 PM | Politics
1232 Report

ಮಂಡ್ಯ ಲೋಕಸಭಾ ಅಖಾಡದಿಂದ ಸುಮಲತಾ ಅಂಬರೀಶ್ ಹಿಂದೆ ಸರಿಯುತ್ತಾರ ಎಂಬ ಪ್ರಶ್ನೆ ಇದೀಗ ಎಲ್ಲರಲ್ಲೂ ಕೂಡ ಮೂಡಿದೆ. ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನ ಮುಖಂಡರು ನಿಖಿಲ್ ಅನ್ನು ಬೆಂಬಲಿಸುವುದಾಗಿ ತಿಳಿಸಿದ್ದರು… ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸುವಂತೆ ತಮ್ಮ ಸ್ಪಷ್ಟ ನಿರ್ಧಾರವನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪ್ರಕಟಿಸುವುದಾಗಿ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ನಾಗಮಂಗಲದ ಬೆಳ್ಳೂರು ಕ್ರಾಸ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಮಲತಾ, ಮಾ.18ರೊಳಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ನಿರ್ಧಾರ ತಿಳಿಸುವುದಾಗಿ ತಿಳಿಸಿದ್ದಾರೆ.. ಈ ವಿಚಾರದಲ್ಲಿ ತಮ್ಮ ಮೇಲೆ ಯಾರೂ ಒತ್ತಡ ಹಾಕಿಲ್ಲ. ಒತ್ತಡ ಹಾಕಲು ಸಾಧ್ಯವಿಲ್ಲ.. ಡಿ.ಕೆ.ಶಿವಕುಮಾರ್ ಅವರು ತಮ್ಮೊಂದಿಗೆ ಮಾತನಾಡಿದ್ದಾರೆ. ಆದರೆ ಮೈತ್ರಿ ಇರುವುದರಿಂದ ಮಂಡ್ಯ ಕ್ಷೇತ್ರ ಬಿಟ್ಟು ಬೇರೆ ಕಡೆ ಸ್ಪರ್ಧಿಸುವ ಸಲಹೆಯನ್ನು ಕೂಡ ಮಾಡಿದ್ದಾರೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ನನ್ನ ಪ್ಲಾನ್ ಏನ್  ಇದೆಯೋ ಅದೇ ರೀತಿ ನಡೆದುಕೊಳ್ಳುತ್ತೆನೆ ಹಾಗೂ ನನ್ನ ಜೊತೆ ಬರುವುದಾಗಿ ಹಲವಾರು ಹೇಳಿದ್ದಾರೆ. ನನ್ನ ಪರ ಪ್ರಚಾರವನ್ನು ಮಾಡುವ ಭರವಸೆ ನೀಡಿದ್ದಾರೆ. ದರ್ಶನ್ ಸಹ ಬೆಂಬಲಿಸಿದ್ದಾರೆ ಎಂದು ಹೇಳಿದರು. ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸುವರೋ ಅಥವಾ ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳುತ್ತಾರೋ ಎಂಬುದನ್ನು ಕಾದು ನೋಡಬೇಕಾಗಿದೆ. ಒಟ್ಟಿನಲ್ಲಿ ಸುಮಲತಾ ಅಖಾಡಕ್ಕಿಳಿಯಲೇ ಬೇಕು ಎಂಬುದು ಅಂಬಿ ಅಭಿಮಾನಿಗಳ ಮಾತು..

Edited By

Manjula M

Reported By

Manjula M

Comments