ಜೆಡಿಎಸ್ ಗೆ ಮತ ಕೇಳುದ್ರೆ ಅಷ್ಟೆ ನಮ್ ಕಥೆ..!!  ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಕೈ ನಾಯಕನ ಈ ಹೇಳಿಕೆ..!!

13 Mar 2019 2:09 PM | Politics
359 Report

ಇತ್ತಿಚಿಗೆ ಲೋಕಸಭಾ ಚುನಾವಣೆಯ ದಿನಾಂಕವು ನಿಗಧಿಯಾಗಿದೆ.. ಈ ಹಿನ್ನಲೆಯಲ್ಲಿ ಎಲ್ಲಾ ಪಕ್ಷಗಳು ಕೂಡ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿವೆ..ಆದರೆ ಮಂಡ್ಯ ಜಿಲ್ಲೆ ಮಾತ್ರ ದಿನದಿಂದ ದಿನಕ್ಕೆ ರಣರಂಗವಾಗುತ್ತಿದೆ…ಸುಮಲತಾ ಹಾಗೂ ನಿಖಿಲ್ ನಡುವೆ ಯುದ್ದ ಸಮರ ಏರ್ಪಟ್ಟಿದೆ…ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಬ್ಬರಿಗೆ ಮಾತ್ರ ಅವಕಾಶ ಇರುವುದರಿಂದ ನಿಖಿಲ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ… ಮತ್ತೊಂದು ಕಡೆ ಸುಮಲತಾ ಸ್ಪರ್ಧಿಸುವುದು ಕೂಡ ಖಚಿತವಾಗಿದೆ…  

ಕಾಂಗ್ರೆಸ್‌ನವರಾದ ನಾವು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಪರ ಮತ ಕೇಳಲು ಹೋದರೆ ಕಾಂಗ್ರೆಸ್‌ನವರೇ ಹೊಡೆದು ಕಳುಹಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಾಗಮಂಗಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಪ್ರಸನ್ನ ಹೇಳಿಕೆಯನ್ನು ಕೊಟ್ಟಿದ್ದಾರೆ. ಮಂಗಳವಾರ ನಾಗಮಂಗಲದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಸನ್ನರವರು , ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ ಎಂಬುದನ್ನು ಜೆಡಿಎಸ್ ಮರೆತಿದೆ…ಜೆಡಿಎಸ್‌ ಪಕ್ಷದವರು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರಿಗೆ ಸುಖಾಸುಮ್ಮನೆ ತೊಂದರೆ ಕೊಡುತ್ತಿದ್ದಾರೆ. ಈಗ ನಾವು ಜೆಡಿಎಸ್‌ ಅಭ್ಯರ್ಥಿ ಪರ ಮತ ಕೇಳಲು ಹೋದರೆ ಹೊರಗಿನ ಅಭ್ಯರ್ಥಿ ಪರ ಮತಯಾಚನೆ ಮಾಡಲು ಬಂದರೆ ಹೊಡೆದು ಕಳುಹಿಸುತ್ತೇವೆ ಎಂದು ನಮ್ಮ ಪಕ್ಷದ ಕಾರ್ಯಕರ್ತರೇ ಹೆದರಿಸುತ್ತಿದ್ದಾರೆ ಎಂದರು. ಕಾಂಗ್ರೆಸ್‌ನ ಎಲ್ಲ ಕಾರ್ಯಕರ್ತರು ಅಂಬರೀಷ್‌ ಅಭಿಮಾನಿಗಳ ಜೊತೆ ಸೇರಿಕೊಂಡಿದ್ದಾರೆ. ಕೊನೆಕ್ಷಣದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್‌ ಅವರೇ ಕಣಕ್ಕಿಳಿಯಬಹುದೆಂದು ಈಗಲೂ ನಮಗೆ ವಿಶ್ವಾಸವಿದೆ ಎಂದರು.ಒಟ್ಟಾರೆಯಾಗಿ ನಿಖಿಲ್ ಕುಮಾರಸ್ವಾಮಿ ಬಗ್ಗೆ ಕಾಂಗ್ರೆಸ್ ಅವರು ಮತಯಾಚನೆ ಮಾಡುವುದು ಯಾಕೋ ಸಂಶಯವಾದಂತೆ ಕಾಣುತ್ತಿದೆ..

Edited By

Manjula M

Reported By

Manjula M

Comments