ಬಿಜೆಪಿ ಪಾಳಯದಲ್ಲಿ ನಡುಕ ಹುಟ್ಟಿಸಿದ ‘ದೋಸ್ತಿ’ ನಾಯಕ..!! ಯಾರ್ ಗೊತ್ತಾ..?

16 Mar 2019 1:07 PM | Politics
4140 Report

ಲೋಕಸಭಾ ಚುನಾವಣೆಗೆ ದಿನಾಂಕ ಈಗಾಗಲೇ ನಿಗಧಿಯಾಗಿದೆ.. ಅದರ ಬೆನ್ನಲೆ ಎಲ್ಲಾ ಪಕ್ಷದವರು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದಾರೆ.. ಒಂದು ಕಡೆ ಬಿಜೆಪಿ , ಮತ್ತೊಂದು ಕಡೆ ದೋಸ್ತಿಗಳು, ಇನ್ನೂ ಪಕ್ಷೇತರ ಅಭ್ಯರ್ಥಿಗಳು ಕೂಡ ಇದ್ದಾರೆ.ಒಟ್ಟಾರೆ ಎಲ್ಲರಿಗೂ ಕೂಡ ಲೋಕಸಭಾ ಚುನಾವಣೆ ಒಂದು ಅಗ್ನಿ ಪರೀಕ್ಷೆಯಂತಿದೆ. ಬಿಜೆಪಿಯ ಭದ್ರ ಬುನಾದಿಯಂತಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಲೇಬೇಕು ಎಂದು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ.. ಕಾಂಗ್ರೆಸ್-ಜೆಡಿಎಸ್ ನಾಯಕರು, ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಸಚಿವ ಟ್ರಬಲ್ ಶೂಟರ್ ಆದ ಡಿ.ಕೆ.ಶಿವಕುಮಾರ್ ಅವರಿಗೆ ವಹಿಸಿದ್ದಾರೆ.

ಹಾಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಮಧು ಬಂಗಾರಪ್ಪ ಅಖಾಡಕ್ಕೆ ಇಳಿದಿದ್ದಾರೆ..  ನವೆಂಬರ್ ನಲ್ಲಿ ನಡೆದ ಉಪಚುನಾವಣೆಯಲ್ಲಿ ಇದೇ ಬಿ.ವೈ.ರಾಘವೇಂದ್ರ ಹಾಗೂ ಮಧು ಬಂಗಾರಪ್ಪ ಮುಖಾಮುಖಿಯಾಗಿದ್ದು, ಬಿಜೆಪಿ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ್ದ ಮಧುಬಂಗಾರಪ್ಪ 52,148 ಮತಗಳ ಅಲ್ಪ ಅಂತರದಿಂದ ಸೋಲು ಅನುಭವಿಸಿದ್ದರು.

ನಿನ್ನೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕುರಿತು ಚರ್ಚೆ ನಡೆಸಿ, ಆ ಕ್ಷೇತ್ರದ ಚುನಾವಣಾ ಜವಾಬ್ದಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.. ಮೊದಲಿನಿಂದಲೂ ಮಧು ಬಂಗಾರಪ್ಪ ಅವರಿಗೆ ಆಪ್ತರಾಗಿರುವ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿಯವರ ಸಲಹೆ ಮೇರೆಗೆ ಮೈತ್ರಿ ಅಭ್ಯರ್ಥಿ ಗೆಲ್ಲಿಸುವ ಜವಾಬ್ದಾರಿಯನ್ನು ಒಪ್ಪಿಕೊಂಡಿದ್ದಾರೆ. ಈ ಬಾರಿಯು ಕೂಡ ಶಿವಮೊಗ್ಗದಲ್ಲಿ ಪ್ರಬಲ ಪೈಪೋಟಿ ಏರ್ಪಡುವುದು ಕಟ್ಟಿಟ್ಟಬುತ್ತಿ..

Edited By

Manjula M

Reported By

Manjula M

Comments