ರಾತ್ರೋರಾತ್ರಿ `ಬೆಂಗಳೂರು ಉತ್ತರ ಕ್ಷೇತ್ರ'ವನ್ನು `ಕಾಂಗ್ರೆಸ್' ಗೆ ಬಿಟ್ಟುಕೊಟ್ಟ ‘ದಳ’..!

25 Mar 2019 3:02 PM | Politics
267 Report

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೋಸ್ತಿ ಸರ್ಕಾರವು ಮೈತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಿದ್ದಾರೆ.. ಮೊದಲೂ ಜೆಡಿಎಸ್ ಕಾಂಗ್ರೆಸ್ ಪಕ್ಷಕ್ಕೆ 12 ಕ್ಷೇತ್ರಗಳ ಬೇಡಿಕೆ ಇಟ್ಟಿತ್ತು… ಆದರೆ ಕೊನೆಗೆ 8 ಕ್ಷೇತ್ರಗಳಿಗೆ ಸುಮ್ಮನಾದರೂ.. ಈಗಾಗಲೇ 8 ಕ್ಷೇತ್ರಗಳಿಗೂ ಕೂಡ ಅಭ್ಯರ್ಥಿಯನ್ನು ಪೈನಲ್ ಮಾಡಿದ್ದಾಗಿದೆ.. ಆದರೆ ಬೆಂಗಳೂರು ಉತ್ತರದಲ್ಲಿ ಮಾತ್ರ ಇನ್ನೂ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಿರಲಿಲ್ಲ.. ಇದೀಗ ಅದೇ ಗೊಂದಲದಲ್ಲಿ ಇದ್ದ ಜೆಡಿಎಸ್ ಪಕ್ಷವು ಬೆಂಗಳೂರು ಉತ್ತರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ವಿಫಲಗೊಂಡ ಹಿನ್ನೆಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ ಎಂದು ಹೇಳಲಾಗುತ್ತಿದೆ.. ಲೋಕಸಭೆ ಚುನಾವಣೆ ಪೂರ್ವ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ 8 ಕ್ಷೇತ್ರಗಳನ್ನು ಪಡೆದುಕೊಂಡಿತ್ತು. ಆದರೆ ಇದೀಗ ಜೆಡಿಎಸ್ ತಾನಾಗೇ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ ಎನ್ನಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿತ್ತು... ಕೊನೆಗೆ ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಪ್ರಬಲ ಜೆಡಿಎಸ್ ಅಭ್ಯರ್ಥಿಗಳ ಹುಡುಕಲು ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ ಎಂದು ಹೇಳಲಾಗುತ್ತಿದೆ.. ಇಂದು ತುಮಕೂರು ಕ್ಷೇತ್ರದಿಂದ ದೇವೆಗೌಡರು  ನಾಮಪತ್ರ ಸಲ್ಲಿಸಲಿದ್ದಾರೆ.

Edited By

Manjula M

Reported By

Manjula M

Comments