ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ..!! ಸುಮಲತಾ ಅಂಬರೀಶ್ ಬಿಜೆಪಿಗೆ ಸೇರ್ಪಡೆ..!?

28 Mar 2019 12:38 PM | Politics
9995 Report

ಈಗಾಗಲೇ ಮಂಡ್ಯ ಲೋಕಸಭಾ ಅಖಾಡ ರಣರಂಗವಾಗಿ ಬಿಟ್ಟಿದೆ.. ಸುಮಲತಾ ಅಖಾಡಕ್ಕೆ ಇಳಿದಿದ್ದೆ ತಪ್ಪಾಯ್ತಾ..ಎನ್ನುವ ರೀತಿಯಲ್ಲಿ ಆಗಿ ಬಿಟ್ಟಿದೆ..  ಲೋಕಸಭಾ ಚುನಾವಣೆಗೆ ದಿನಗಳನ್ನು ಆರಂಭವಾಗಿರುವ ಸಂದರ್ಭದಲ್ಲೇ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದ್ದು, ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಮಹತ್ವದ ಮಾಹಿತಿಯೊಂದನ್ನು ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದು, ಈ ಕುರಿತು ಈಗಾಗಲೇ ಮಾತುಕತೆ ನಡೆದಿದೆ ಎಂದು ರಮೇಶ್ ಜಿಗಜಿಣಗಿ ಹೇಳಿದ್ದಾರೆ.  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸುಮಲತಾ ಅವರಿಗೆ ಬೆಂಬಲ ನೀಡಿದ್ದು, ಈಗ ರಮೇಶ್ ಜಿಗಜಿಣಗಿ ಅವರ ಹೇಳಿಕೆಯಿಂದಾಗಿ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆಂಬ ವದಂತಿಗೆ ಪುಷ್ಟಿ ನೀಡಿದೆ. ಈಗಾಗಲೇ ಮಂಡ್ಯ ಅಖಾಡದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸುಮಲತಾ ಮುಂದೆ ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೊಡಬೇಕಿದೆ.

Edited By

Manjula M

Reported By

Manjula M

Comments