ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ ಸುಮಲತಾ ಅಂಬರೀಶ್  ಹೇಳಿಕೆ..!!

06 Apr 2019 10:24 AM | Politics
3445 Report

ಈಗಾಗಲೇ ರಾಜಕೀಯ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸುತ್ತಿವೆ.. ಲೋಕಸಭೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಒಳಜಗಳಗಳು ಕಾಣಿಸುತ್ತಿವೆ… ಅಷ್ಟೆ ಅಲ್ಲದೆ ಮಂಡ್ಯ ಅಖಾಡ ಮಾತ್ರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಒಂದು ಕಡೆ ಪಕ್ಷೇತರ ಅಭ್ಯರ್ಥಿ ಸುಮಲತಾ, ಮತ್ತೊಂದು ಕಡೆ ದೋಸ್ತಿ ಅಭ್ಯರ್ಥಿ ನಿಖಿಲ್ ಬಿಸಿಲು ಎನ್ನದೆ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ.

ಒಂದು ವೇಳೆ ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದರೆ, ಬಿಜೆಪಿಗೆ ಸೇರಿಕೊಳ್ಳುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು.  ಈ ಮಾತಿಗೆ ಸ್ಟಷ್ಟನೆಯನ್ನು ನೀಡಿರುವ  ಸುಮಲತಾ ಚುನಾವಣೆ ಬಳಿಕ ನಾನು ಬಿಜೆಪಿ ಸೇರುವುದಿಲ್ಲ ಎಂದಿದ್ದಾರೆ.  ಈ ಮೂಲಕ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರಿಗೆ ಬೆಂಬಲ ಘೋಷಿಸಿದ್ದ ಬಿಜೆಪಿಗೆ ಮುಖ ಭಂಗವಾದಂತೆ ಆಗಿದೆ. ಶುಕ್ರವಾರ ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಮುಸ್ಲಿಂ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿದ ಸುಮಲತಾ ನಂತರ ನಡೆದ ಸಭೆಯಲ್ಲಿ ಮಾತನಾಡಿದರು ಈ ವೇಳೆಯಲ್ಲಿ ನನ್ನ ಮೊದಲ ಆಧ್ಯತೆ ಕಾಂಗ್ರೆಸ್ ಆಗಿತ್ತು. ಅಲ್ಲಿ ಟಿಕೆಟ್​ ಸಿಗದ ಕಾರಣ ಪಕ್ಷೇತರವಾಗಿ ಸ್ಪರ್ಧಿಸಿರುವೆ, ಇದಲ್ಲದೇ ಚುನಾವಣೆ ಬಳಿಕ ನಾನು ಬಿಜೆಪಿ ಸೇರುವುದಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಒಟ್ಟಾರೆಯಾಗಿ ಅಂಬರೀಶ್ ಅವರ ಮಾರ್ಗದಲ್ಲೆ ಸುಮಲತಾ ನಡೆಯಲು ನಿರ್ಧಾರ ಮಾಡಿದ್ದಾರೆ. ಅಂಬರೀಶ್ ಕೂಡ ಕಾಂಗ್ರೆಸ್ ಪಕ್ಷ ಬಿಟ್ಟು ಬೇರೆ ಯಾವ ಪಕ್ಷದಲ್ಲಿಯೂ ಕೂಡ ಗುರುತಿಸಿಕೊಂಡಿರಲಿಲ್ಲ… ಹಾಗಾಗಿ ಸುಮಲತಾ ಕೂಡ ಆ ನಿರ್ಧಾರಕ್ಕೆ ಬದ್ದರಾಗಿದ್ದಾರೆ ಎನ್ನಲಾಗಿದೆ.

Edited By

Manjula M

Reported By

Manjula M

Comments