ರಾಜಕೀಯ ವಲಯದಲ್ಲಿ ಹೊಸ ವಿವಾದಕ್ಕೆ ಕಾರಣವಾದ ಸಚಿವ ಎಚ್.ಡಿ ರೇವಣ್ಣ..!!!

02 May 2019 1:10 PM | Politics
1546 Report

ಮೊನ್ನೆ ಮೊನ್ನೆಯಷ್ಟೆ ಎಸ್ ಎಸ್ ಎಲ್ ಸಿ ಫಲಿತಾಂಶ ಹೊರಬಂದಿದೆ.. ಪ್ರತಿಬಾರಿಯಂತೆ ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ ಬಂದರೆ, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.  ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದರಿಂದ ಇದಕ್ಕೆ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಣ ಎಂದು ಹೇಳಲಾಗಿತ್ತು.

ಆದರೆ ಈ ವಿಷಯವನ್ನು ಸಚಿವ ಹೆಚ್.ಡಿ. ರೇವಣ್ಣ ಅಲ್ಲಗಳೆದಿದ್ದಾರೆ.ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಸನರಾಜ್ಯಕ್ಕೆ ಮೊದಲು ಬಂದಿರುವುದಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಣ ಅಲ್ಲ..ಅದಕ್ಕೆ ನನ್ನ ಹೆಂಡತಿ ಭವಾನಿ ರೇವಣ್ಣ ಕಾರಣ ಎಂದಿದ್ದಾರೆ. ಹಾಸನ ಜಿಲ್ಲೆ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿರುವಂತಹ ತಮ್ಮ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಅವರು ತಿಳಿಸಿದ್ದಾರೆ. ರೋಹಿಣಿ ಸಿಂಧೂರಿ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂಬ ಮಾತುಗಳನ್ನು ಆಡಿದ್ದಾರೆ.. ಜವಬ್ಧಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಈ ರೀತಿ ಮಾತನಾಡುವುದು ಸರಿಯಲ್ಲ ಎಂಬುದು ಕೆಲವರ ಮಾತಾಗಿದೆ.

Edited By

Manjula M

Reported By

Manjula M

Comments