ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡೇಟ್ ಫಿಕ್ಸ್..

02 May 2019 3:56 PM | Politics
264 Report

ಈಗಷ್ಟೆ ಲೋಕಸಭಾ ಚುನಾವಣೆಯ ಕಾವು ಮುಗಿದಿದೆ..ಫಲಿತಾಂಶಕ್ಕಾಗಿ ಅಭ್ಯರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ.. ಈಗಾಗಲೇ ಮತ್ತೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಮೇ 29ರಂದು ರಾಜ್ಯದ 63 ನಗರ ಸಭೆ, ಪುರಸಭೆ ಮತ್ತು ನಗರ ಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ ಎಂದು ಸುದ್ದಿಗೋಷ್ಟಿಯಲ್ಲಿ ಚುನಾವಣಾಧಿಕಾರಿ ತಿಳಿಸಿದ್ದಾರೆ.  

ಈ ವಿಷಯವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಾಹಿತಿ ನೀಡಿದ ರಾಜ್ಯ ಚುನಾವಣಾಧಿಕಾರಿ ಶ್ರೀನಿವಾಸಾಚಾರಿ, ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆಗಳಿಗೆ ಮೇ.29ರಂದು ಮತದಾನ ನಡೆಯಲಿದೆ  ಅದೇ ರೀತಿ ಮೇ.31ರಂದು ಮತ ಏಣಿಕೆ ನಡೆಯಲಿದೆ ಎಂದು ತಿಳಿಸಿದರು. ರಾಜ್ಯದ ಒಟ್ಟು 63 ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ಚುನಾವಣೆ ನಡೆಯಲಿದ್ದು, ಇದರಲ್ಲಿ ನಗರಸಭೆ, ಪುರಸಭೆ ಮತ್ತು ನಗರ ಪಾಲಿಕೆಗಳು ಸೇರಿಕೊಂಡಿರುತ್ತವೆ.. ಮೇ.16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ.20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಮೇ 23 ಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಬರಲಿದ್ದು, ಅದರ ಬೆನ್ನಲೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದೆ.

Edited By

Manjula M

Reported By

Manjula M

Comments