ಚುನಾವಣೆಯ ಫಲಿತಾಂಶದ ಬಗ್ಗೆ ಸುಮಲತಾ ಹೇಳಿದ್ದೇನು ಗೊತ್ತಾ.?

15 May 2019 10:28 AM | Politics
486 Report

ಈಗಾಗಲೇ ಲೋಕಸಮರದ ಫಲಿತಾಂಶಕ್ಕೆ ದಿನಗಣನೆ ಪ್ರಾರಂಭವಾಗಿದೆ…ಮಂಡ್ಯದ ಅಖಾಡದ ಕಾವು ಮಾತ್ರ ಇನ್ನೂ ತಣ್ಣಗೆ ಆಗಿಲ್ಲ.. ಫಲಿತಾಂಶ ಪ್ರಕಟವಾಗುವ ದಿನಾಂಕ ಹತ್ತಿರ ಬರುತ್ತಿದ್ದಂತೆ ಅಭ್ಯರ್ಥಿಗಳೆಲ್ಲಾ ಟೆಂಪಲ್ ರನ್ ಶುರು ಮಾಡಿಕೊಂಡಿದ್ದಾರೆ.. ಇದೀಗ ಮಂಡ್ಯದ ಪಕ್ಷೇತರ ಅಭ್ಯರ್ಥಿಯಾದ ಸುಮಲತಾ ಕೂಡ ಸೋಲು ಗೆಲುವಿನ ಬಗ್ಗೆ ಮಾತನಾಡಿದ್ದಾರೆ.  'ಡಾಟರ್ ಅಫ್ ಪಾರ್ವತಮ್ಮ' ಚಿತ್ರದ ಟ್ರೈಲರ್ ಮತ್ತು ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಮಂಡ್ಯದ ಪಕ್ಷೇತರ ಅಭ್ಯರ್ಥಿಯಾದ ಸುಮಲತಾ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾನೇ ಗೆಲ್ಲುತ್ತೇನೆ ಎನ್ನುವ ಅತಿಯಾದ ಆತ್ಮವಿಶ್ವಾಸವಿಲ್ಲ ಎಂದು ತಿಳಿಸಿದ್ದಾರೆ. ಇಷ್ಟೇ ಮತಗಳ ಅಂತರದಿಂದ ನಾನು ಜಯಗಳಿಸುತ್ತೇನೆ ಎಂದು ಹೇಳಲಾರೆ. ಸಮೀಕ್ಷೆಗಳ ಮೇಲೆ ನನಗೆ ಯಾವುದೇ ನಂಬಿಕೆ ಇಲ್ಲ. ನಾವು ಫಲಿತಾಂಶದ ಕುರಿತಾಗಿ ಯಾವ ಸಮೀಕ್ಷೆಗಳನ್ನು ಮಾಡಿಸಿಲ್ಲ. ಪ್ರತಿದಿನ ಒಂದಲ್ಲ ಒಂದು ಸಮೀಕ್ಷೆ ವರದಿ ಪ್ರಕಟವಾಗುತ್ತಿವೆ. ಅದರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಮಂಡ್ಯ ಮತದಾರರ ಮೇಲೆ ವಿಶ್ವಾಸವಿದ್ದು, ತಮ್ಮ ಪರವಾಗಿ ಫಲಿತಾಂಶ ಬರುವ ನಿರೀಕ್ಷೆ ಇದೆ. ಯಾವುದೇ ಒತ್ತಡ ಇಲ್ಲ ಎಂದು ಅವರು ತಿಳಿಸಿದ್ದಾರೆ.. ಫಲಿತಾಂಶ ಬಂದ ಮೇಲೆ ಮಂಡ್ಯದಲ್ಲಿ ಯಾವ ರೀತಿಯ ಬದಲಾವಣೆ ಆಗುತ್ತದೆ ಜೊತೆಗೆ ರಾಜ್ಯ ರಾಜಕಾರಣದಲ್ಲಿ ಯಾವ ರೀತಿ ಬದಲಾವಣೆಯಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

Edited By

Manjula M

Reported By

Manjula M

Comments