ಸಚಿವ ಡಿಕೆಶಿ ವಿರುದ್ದ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ರೇಣುಕಾಚಾರ್ಯ…!!

16 May 2019 10:41 AM | Politics
3364 Report

ವಿಧಾನ ಸಭಾ ಚುನಾವಣೆಯು ಮುಗಿದು ಒಂದು ವರ್ಷ ಕಳೆದು ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಆಯ್ಕೆಯಾದ ಮೇಲೆಯೂ ಕೂಡ ಇನ್ನೂ ಸಿಎಂ ಸೀಟಿನ ಬಗ್ಗೆಯೇ ಚರ್ಚೆಯಾಗುತ್ತಿದೆ… ದೋಸ್ತಿ ಸರ್ಕಾರ ರಚನೆಯಾಗಿ ಈಗಾಗಲೇ ಅಧಿಕಾರವನ್ನು ನಡೆಸುತ್ತಿದ್ದಾರೆ.  ಒಂದು ವೇಳೆ ಸಿಎಂ ಆಗುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದ್ರೆ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಬದಿಗಿಟ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿದ್ದರಾ ಎಂಬ ಅನುಮಾನ ರೇಣುಕಾಚಾರ್ಯ ಅವರ ಹೇಳಿಕೆಯಿಂದ  ಎಲ್ಲರಲ್ಲಿಯೂ ಕೂಡ ಮೂಡಿದೆ.

ಹುಬ್ಬಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇಣುಕಾಚಾರ್ಯ ಕುಂದಗೋಳ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಅವರು 50 ಕೋಟಿ ರೂ. ಹೂಡಿಕೆ ಮಾಡುತ್ತಿದ್ದಾರೆ. ಮತದಾರರಿಗೆ ಹಣ ಹಂಚಲೆಂದು ಬೆಂಗಳೂರಿನಿಂದ 500 ಮಂದಿಯನ್ನು ಬಿಟ್ಟಿದ್ದಾರೆ ಎಂದು ರೇಣುಕಾಚಾರ್ಯ ಆರೋಪ ಮಾಡಿದ್ದಾರೆ. ಡಿಕೆಶಿ ಭ್ರಷ್ಟಾಚಾರ ನಡೆಸಿದ ಹಣವನ್ನು ಇಲ್ಲಿ ಖರ್ಚು ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಪ್ರತಿ ಪಂಚಾಯಿತಿಯ ಜವಾಬ್ದಾರಿಯನ್ನ ಪಕ್ಷದ ಶಾಸಕರಿಗೆ ನೀಡಿದ್ದು, ಪ್ರತಿ ಪಂಚಾಯಿತಿ ವ್ಯಾಪ್ತಿಗೆ ಇಷ್ಟು ಕೋಟಿ ರೂ. ಖರ್ಚು ಮಾಡಬೇಕು. ಸಿಎಂ ಆದರೆ ನಿಮಗೆ ಈ ಸಚಿವ ಸ್ಥಾನ ನೀಡುತ್ತೇನೆ ಎಂದು ಆಮಿಷ ಒಡ್ಡಿದ್ದಾರೆ ಎಂದು ರೇಣುಕಾಚಾರ್ಯ ಆರೋಪ ಮಾಡಿದ್ದಾರೆ. ಒಟ್ಟಿನಲ್ಲಿ ನೋಟು ಹಂಚಿದರೆ ವೋಟು ಬೀಳುತ್ತದೆ ಎಂಬುದು ಸಾಕಷ್ಟು ಶಾಸಕರ ನಂಬಿಕೆಯಾಗಿದ್ದು, ಅದರಂತೆ ಪ್ರತಿಬಾರಿಯ ಚುನಾವಣೆಯಲ್ಲಿ ಮತದಾರರಿಗೆ ವಿವಿಧ ರೀತಿಯ ಆಮಿಷವನ್ನು ತೋರಿಸುತ್ತಾರೆ.. ಈ ಬಾರಿಯ ಲೋಕಸಭಾ ಚುನಾವಣೆಯು ತುಂಬಾ ಕುತೂಹಲವಾಗಿತ್ತು… ಮೇ 23 ರಂದು ಬರುವ ಫಲಿತಾಂಶಕ್ಕಾಗಿ ಎಲ್ಲ ಅಭ್ಯರ್ಥಿಗಳು ಕಾಯುತ್ತಿದ್ದಾರೆ..

 

Edited By

Manjula M

Reported By

Manjula M

Comments