ಸಿಎಂ ಕುಮಾರಸ್ವಾಮಿ ಮುಂದೆ ಕಾಂಗ್ರೆಸ್ ಸಚಿವರಿಟ್ಟ ಪ್ರಶ್ನೆ ಯಾವುದು..?

17 May 2019 12:21 PM | Politics
635 Report

ಮೇಲ್ನೋಟಕ್ಕೆ ದೋಸ್ತಿ ಸರ್ಕಾರ ಚೆನ್ನಾಗಿ ಇದ್ರೂ ಒಳಗೊಳಗೆ ಒಳಜಗಳು ಸದ್ದಿಲ್ಲದೆ ನಡೆಯುತ್ತಿವೆ… ಜೆಡಿಎಸ್ ಅಭ್ಯರ್ಥಿಗಳನ್ನ ಕಂಡರೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಗಲ್ಲ.. ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಂಡರೆ ಜೆಡಿಎಸ್ ಅಭ್ಯರ್ಥಿಗೆ ಆಗಲ್ಲ… ಆದರೆ ಮೇಲ್ನೋಟಕ್ಕೆ ಮಾತ್ರ ಪರಸ್ವರ ಚೆನ್ನಾಗಿ ಇರುವವರಂತೆ ಕಾಣುತ್ತಾರೆ.. ಇದೀಗ ಕಾಂಗ್ರೆಸ್ ಸಚಿವ ಎಂಟಿಬಿ ನಾಗರಾಜು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಪ್ರಶ್ನೆ ಮಾಡಿದ್ದಾರೆ..

ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎನ್ನುವುದಕ್ಕೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೂ ಏನು ಸಂಬಂಧ? ಎಂದು ಸಚಿವ ಎಂಟಿಬಿ ನಾಗರಾಜ್ ಕುಮಾರಸ್ವಾಮಿಯವರನ್ನು ಪ್ರಶ್ನೆ ಮಾಡಿದ್ದಾರೆ..ಮಾದ್ಯಮದವರೊಂದಿಗೆ ಮಾತನಾಡಿದ ನಾಗರಾಜು ಶಾಸಕಾಂಗ ಸಭೆಯಲ್ಲಿ ಪಕ್ಷದ ಶಾಸಕರೆಲ್ಲ ಸೇರಿ ತೀರ್ಮಾನಿಸಿದರೆ, ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದೆ ಎಂದು ತಿಳಿಸಿದ್ದಾರೆ.. ಆಕಸ್ಮಾತ್ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಶಾಸಕರು ತೀರ್ಮಾನಿಸಿದರೆ, ಅದನ್ನು ತಡೆಯಲು ಯಾರಿಂದಲೂ ಕೂಡ ಸಾಧ್ಯವಿಲ್ಲ. ಕುಮಾರಸ್ವಾಮಿಯವರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎನ್ನುವುದಕ್ಕೂ ಸಿಎಂ ಕುಮಾರಸ್ವಾಮಿ ಅವರಿಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಷ್ಟು ಕಾಳಜಿ ಇದ್ದರೆ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ಸ್ಥಾನ ಬಿಟ್ಟುಕೊಡಲಿ ಎಂದು ತಿಳಿಸಿದ್ದಾರೆ… ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಯಾರು ತಲೆಹಾಕಬಾರದು.. ಅವರವರ ಪಕ್ಷಗಳಿಗೆ ಬಿಟ್ಟಿದ್ದು.. ಅವರು ಯಾವ ರೀತಿಯ ನಿರ್ಧಾರ ಬೇಕಾದರೂ ಕೂಡ ತೆಗೆದುಕೊಳ್ಳಬಹುದು ಎಂದಿದ್ದಾರೆ.

Edited By

Manjula M

Reported By

Manjula M

Comments