ಸಂಸದ ಪ್ರಜ್ವಲ್ ರೇವಣ್ಣ ಹೆಗಲಿಗೆ ಬಿತ್ತು ಹೊಸ ಜವಾಬ್ದಾರಿ..?

03 Jun 2019 10:07 AM | Politics
1249 Report

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಅಖಾಡಕ್ಕೆ ಇಳಿದಿದ್ದ ದೋಸ್ತಿ ನಾಯಕರ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಭರ್ಜರಿ ಗೆಲುವನ್ನು ಸಾಧಿಸಿದ್ದರು..ಈ ಭಾರಿ ಕೇವಲ ಒಂದೇ ಒಂದು ಸ್ಥಾನವನ್ನು ಮಾತ್ರ ಜೆಡಿಎಸ್ ಗಿಟ್ಟಿಸಿಕೊಂಡಿತ್ತು.. ಅದು ಹಾಸನ ಕ್ಷೇತ್ರ ಮಾತ್ರ… ಇದೀಗ  ಹಾಸನ ಲೋಕಸಭೆ ಕ್ಷೇತ್ರದಲ್ಲಿ ಭರ್ಜರಿ ಜಯಗಳಿಸಿ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲು ವರಿಷ್ಠರು ಮುಂದಾಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪಕ್ಷ ಸಂಘಟನೆಗೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಹೊಸದೊಂದು ಕಾರ್ಯತಂತ್ರವನ್ನು ರೂಪಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಲು ಪಕ್ಷದವರು ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.  ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿರುವ ಮಧುಬಂಗಾರಪ್ಪ ಯುವ ಘಟಕದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ದೇವೇಗೌಡರಿಗೆ ಮನವಿ ಮಾಡಿದ್ದು, ಇದಕ್ಕೆ ಒಪ್ಪಿದ ದೇವೇಗೌಡರು ಪ್ರಜ್ವಲ್ ಗೆ ಅಧ್ಯಕ್ಷ ಸ್ಥಾನ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.. ಒಟ್ಟಾರೆಯಾಗಿ ಈ ಬಾರಿ ಗೆಲುವು ಸಾಧಿಸಿರುವ ಪ್ರಜ್ವಲ್ ರೇವಣ್ಣನವರಿಗೆ ಹೊಸ ಜವಬ್ಧಾರಿಯನ್ನು ನೀಡಲು ಪಕ್ಷದವರು ತಿರ್ಮಾನಿಸಿದ್ದಾರೆ.

Edited By

Manjula M

Reported By

Manjula M

Comments