ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ ಸಿದ್ದರಾಮಯ್ಯ ನವರ ಹೇಳಿಕೆ..!!

05 Jun 2019 3:45 PM | Politics
1597 Report

ರಾಜಕೀಯ ವಲಯದಲ್ಲಿ ಒಂದಿಷ್ಟು ವಿಷಯಗಳ ಬಗ್ಗೆ ಆಗಾಗ ಚರ್ಚೆಯಾಗುತ್ತಿರುತ್ತವೆ.. ಅದರಲ್ಲೂ ವಿವಾದಾತ್ಮಕ ಹೇಳಿಕೆಗಳಂತೂ ಸಿಕ್ಕಾಪಟ್ಟೆಯಾಗುತ್ತವೆ.. ಇಂದು ಬೆಳ್ಳಿಗೆ ಮಾಜಿ ಮುಖ್ಯ ಮಂತ್ರಿಸಿದ್ದರಾಮಯ್ಯ ಹೇಳಿರುವ ಒಂದೇ ಒಂದು ಮಾತು ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಗೆ ಗುರಿಯಾಗಿದೆ. ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಚ್ಚಿದ ಕಿಡಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿ ಚರ್ಚೆಗೆ ಕಾರಣವಾಗಿದೆ..

ಸೋಷಿಯಲ್ ಮೀಡಿಯಾದಲ್ಲಿ ಟ್ವಿಟರ್‍ನಲ್ಲಿ ಸಿದ್ದರಾಮಯ್ಯನವರು ಕೇಂದ್ರದ ಮೋದಿ ಸರ್ಕಾರ ರಾಜ್ಯದಿಂದ ಗೆದ್ದಿರುವ ದಲಿತರಿಗೆ ಸಚಿವ ಸ್ಥಾನ ನೀಡಿಲ್ಲ. ದೊಡ್ಡ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದ್ದಾರೆ.. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ನೀವು ಬೇಕಾದರೆ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಿ ನೋಡೋಣ. ದಲಿತರ ಬಗ್ಗೆ ಕೇವಲ ಮಾತುಗಳಲ್ಲಿ ಹೇಳೋದು ಬೇಡ. ಅವರ ಬಗ್ಗೆ ಕಾಳಜಿ ಇದ್ದರೆ ಮಾಡಿ ತೋರಿಸಿ ಎಂದು ಸವಾಲು ಹಾಕಿತು. ರಾಜಕೀಯದ ಮದ್ಯೆ ಜಾತಿ ರಾಜಕೀಯವನ್ನು ತಂದು ರಾಜಕೀಯದಲ್ಲಿ ಅಲ್ಲೋಲ್ಲ ಕಲ್ಲೋಲ ಸೃಷ್ಟಿ ಮಾಡಿದಂತಾಗುತ್ತದೆ… ರಾಜಕೀಯವೇ ಅಷ್ಟು ಯಾವಾಗ ಯಾವ ರೀತಿಯ ಬೆಳವಣಿಗೆಗಳು ಆಗುತ್ತವೆ ಎಂಬುದು ಗೊತ್ತಾಗುವುದಿಲ್ಲ…

Edited By

Manjula M

Reported By

Manjula M

Comments