ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ವಿಶ್ವನಾಥ್‌-ರಾಮಲಿಂಗರೆಡ್ಡಿ ಭೇಟಿ..!!

19 Jun 2019 10:48 AM | Politics
177 Report

ಈಗಾಗಲೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸುವಂತಹ ಘಟನೆಗಳು ನಡೆಯುತ್ತಿವೆ… ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ದ ಕಾಂಗ್ರೆಸ್ ಪಕ್ಷದವರೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಿಡಿ ಕಾರುತ್ತಿದ್ದಾರೆ. ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ ಎನ್ನುತ್ತಿದ್ದಾರೆ.  ಸ್ವಲ್ಪ ದಿನಗಳ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.. ಆದರೆ ಅದನ್ನ ಇನ್ನೂ ಅಂಗೀಕಾರ ಮಾಡಿಲ್ಲ ಎನ್ನಲಾಗುತ್ತಿದೆ.

ಇದೆಲ್ಲದರ ನಡುವೆ ಇದೀಗ ಶಾಸಕ ರಾಮಲಿಂಗರೆಡ್ಡಿ ಕೂಡ ಮಾಜಿ ಸಿಎಂ ಸಿದ್ದರಾಮಯ್ಯರವರ ನಡೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಹೆಚ್‌.ವಿಶ್ವನಾಥ್‌ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಮಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ದ ನೇರವಾಗಿಯೇ ಕಿಡಿಕಾರಿದರು. ಇದೀಗ ಇಂದು ಬೆಳಗ್ಗೆ ಹೆಚ್‌.ವಿಶ್ವನಾಥ್‌ ಅವರು ರಾಮಲಿಂಗರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ರಾಜಕೀಯ ವಿಷಯಗಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಸಿದ್ದರಾಮಯ್ಯರ ನಡವಳಿಕೆ ನಮಗೆ ಇಷ್ಟವಾಗುತ್ತಿಲ್ಲ ಎನ್ನುತ್ತಿರುವ ಕಾಂಗ್ರೆಸ್‌ನ ಶಾಸಕರು, ನಾಯಕರುಗಳನ್ನು ಒಗ್ಗೂಡಿಸುವುದಕ್ಕೆ ಹೆಚ್‌.ವಿಶ್ವನಾಥ್‌ ಅವರು ಮುಂದಾಗಿದ್ದಾರೆ? ಎನ್ನುವ ಮಾತೊಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.ರಾಮಲಿಂಗರೆಡ್ಡಿಯವರನ್ನು ಎಚ್ ವಿಶ್ವನಾಥ್ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ ಎನ್ನಬಹುದು.. ಮುಂಬರುವ ದಿನಗಳಲ್ಲಿ ಇದು ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments