ಮತ್ತೆ ಬಿಜೆಪಿ ಪರ ಬ್ಯಾಟ್ ಬೀಸಿದ ಜೆಡಿಎಸ್ ಪ್ರಭಾವಿ ಸಚಿವ..!!

03 Jul 2019 12:30 PM | Politics
954 Report

ರಾಜ್ಯ ರಾಜಕೀಯ ವಲಯದಲ್ಲಿ ಹೆಚ್ಚು ವಿಷಯಗಳು ಆಗಿಂದಾಗೆ ಚರ್ಚೆಯಾಗುತ್ತಲೇ ಇರುತ್ತವೆ.. ಅದರಲ್ಲಿಯೂ ಇತ್ತಿಚಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟಿರುವ ಹೇಳಿಕೆ ಹೆಚ್ಚು ಚರ್ಚೆಗೆ ಒಳಗಾಗಿದೆ.  ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಜಿ.ಟಿ.ದೇವೇಗೌಡ ಇದೀಗ ತಿರುಗೇಟು ನೀಡಿದ್ದು, ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದು  ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮೈಸೂರಿನಲ್ಲಿ ಮಾತನಾಡಿದ ಜಿಟಿ ದೇವೆಗೌಡರು , ಸರ್ಕಾರ ರಚನೆಯಾದ ಆರಂಭದಲ್ಲಿ ಬಿಜೆಪಿ ಅವರು ಆಪರೇಷನ್ ಕಮಲ ಮಾಡುತ್ತಿದ್ದರು. ಆದರೆ ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದರು. ರಾಜ್ಯದಲ್ಲಿ ಸದ್ಯ ದೋಸ್ತಿ ಸರ್ಕಾರ ಭದ್ರವಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಇನ್ನೂ ನಾಲ್ಕು ವರ್ಷ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ನರೇಂದ್ರ ಮೋದಿ ಕೇಂದ್ರದಲ್ಲಿ 5 ವರ್ಷ ಆಡಳಿತ ನಡೆಸುತ್ತಾರೆ ಎಂದಿದ್ದಾರೆ. ಆದರೂ ಸಾಕಷ್ಟು ಜನರಿಗೆ ಜಿಟಿ ದೇವೆಗೌಡರು ಯಾಕೆ ಬಿಜೆಪಿ ಪರ ಮಾತನಾಡುತ್ತಿದ್ದಾರೆ  ಎಂಬ ಅನುಮಾನಗಳು ಮೂಡುತ್ತಿವೆ. ಒಟ್ಟಾರೆಯಾಗಿ ರಾಜಕೀಯ ವಲಯದಲ್ಲಿ ಸಾಕಷ್ಟು ಹಸಿ ಬಿಸಿ ಸುದ್ದಿಗಳು ಕೇಳಿ ಬರುತ್ತಲೆ ಇವೆ.. ಹಾಗಾಗಿ ಇನ್ನು ಮುಂದಿನ ದಿನಗಳಲ್ಲಿ ಯಾವೆಲ್ಲಾ ರೀತಿಯ ಬದಲಾವಣೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments