ಮೈತ್ರಿ ಸರ್ಕಾರಕ್ಕೆ ಶಾಕ್ ಮೇಲೆ ಶಾಕ್: ದೋಸ್ತಿ ಸರ್ಕಾರದ ಮತ್ತೊಂದು ವಿಕೆಟ್ ಪತನ

08 Jul 2019 11:19 AM | Politics
201 Report

ಈಗಾಗಲೇ ಇರುವ ದೋಸ್ತಿ ಸರ್ಕಾರದ ಪತನಕ್ಕೆ ದಿನಗಣನೆ ಆರಂಭವಾಗಿದೆ ಎಂಬುದು ಕೆಲವರ ಅಭಿಪ್ರಾಯವಾಗಿದೆ.. ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ದಿನದಿಂದಲೂ ಕೂಡ ಮೈತ್ರಿ ಸರ್ಕಾರ ಪತನವಾಗುತ್ತದೆ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಇದೀಗ ಅದನ್ನು ಕಾರ್ಯರೂಪಕ್ಕೆ ತರುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ದೋಸ್ತಿಯ ಕೆಲವು ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಮೈತ್ರಿ ಸರ್ಕಾರದ 13 ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ... ಇದೀಗ ಮತ್ತೊಬ್ಬ ಶಾಸಕ ರಾಜೀನಾಮೆ ನೀಡಿದ್ದಾರೆ.

ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಮೈತ್ರಿ ಸರ್ಕಾರದ 13 ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರ ಸಂಕಷ್ಟದಲ್ಲಿದೆ. ಈ ಬೆನ್ನಲ್ಲೇ ಪಕ್ಷೇತರ ಶಾಸಕ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದ್ದು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೂನ್. 14 ರಂದು ಪ್ರಮಾಣ ವಚನ ಸ್ವೀಕರಿಸಿದ್ದ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಒಟ್ಟಿನಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ದಿನಗಣನೆ ಆರಂಭವಾಗಿರುವ ಲಕ್ಷಣಗಳು ಕಾಣುತ್ತಿವೆ.. ಮುಂಬರುವ ದಿನಗಳಲ್ಲಿ ರಾಜಕೀಯದಲ್ಲಿ ಯಾವೆಲ್ಲ ರೀತಿಯ ಬದಲಾವಣೆಗಳು ಆಗುತ್ತವೆ ಎಂಬುದನ್ನು ಕಾದುನೋಡಬೇಕಿದೆ.

Edited By

Manjula M

Reported By

Manjula M

Comments