ಹೆಚ್.ಡಿಡಿ, ಸಿಎಂ ಕುಮಾರಸ್ವಾಮಿಗೆ ಖಡಕ್ ಎಚ್ಚರಿಕೆ ಕೊಟ್ಟ ಸ್ವಾಮೀಜಿ..!!

16 Jul 2019 1:33 PM | Politics
2594 Report

ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿವೆ.. ಸದ್ಯ ಅತಂತ್ರ ಸ್ಥಿತಿಯಲ್ಲಿರುವ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿಗಳು ಶತ ಪ್ರಯತ್ನವನ್ನು ಮಾಡುತ್ತಿದ್ದಾರೆ. ಇದೇ ಹಿನ್ನಲೆಯಲ್ಲಿ ಗುರುವಾರ ವಿಶ್ವಾಸ ಮತಯಾಚನೆ ಮಾಡಲು ದೋಸ್ತಿಗಳು ಮುಂದಾಗಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ವಾಲ್ಮೀಕಿ ಸಮುದಾಯದ ಪ್ರಸನ್ನಾನಂದ ಸ್ವಾಮೀಜಿ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಮಾಜಿ ಪ್ರಧಾನಿ ದೇವೇಗೌಡರು ನಾಯಕ ಸಮುದಾಯದ ನಾಯಕರನ್ನು ತುಳಿಯುವ ಪ್ರಯತ್ನ ಮಾಡಬಾರದು. ದೇವೇಗೌಡರಿಗೆ ಮತ್ತು ಕುಮಾರಸ್ವಾಮಿಗೆ ನಾಯಕ ಸಮುದಾಯದ ಮತ ಬೇಕು. ಹೀಗಾಗಿ ಕೆ.ಎನ್. ರಾಜಣ್ಣರಂತಹ ನಾಯಕರನ್ನು ತುಳಿಯವ ಕೆಲಸಕ್ಕೆ ಕೈ ಹಾಕಬಾರದು ಎಂದು ಸ್ವಾಮೀಜಿ ಪರೋಕ್ಷವಾಗಿ ಸಿಎಂ ಕುಮಾರಸ್ವಾಮಿಯವರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಇನ್ನು ಸರ್ಕಾರದಲ್ಲಿ ಏನಾದರೂ ಬದಲಾವಣೆಯಾದರೂ ನಮ್ಮ ಹೋರಾಟವನ್ನು ನಾವು ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ. ಮತ ಹಾಕಲು ಮಾತ್ರ ನಮ್ಮ ಸಮುದಾಯದವರು ಬೇಕು.. ಆದರೆ ಅವರ ಬೇಡಿಕೆಗಳನ್ನು ಮಾತ್ರ ಈಡೇರಿಸಲು ಸಾಧ್ಯವಿಲ್ಲ ಎಂದು ಕಿಡಿ ಕಾರಿದ್ದಾರೆ.

Edited By

Manjula M

Reported By

Manjula M

Comments