ಇಂದು ಬೆಳಗ್ಗೆ 10.30 ಕ್ಕೆ ಸುಪ್ರೀಂಕೋರ್ಟ್ ತೀರ್ಪು..!! ರಾಜ್ಯ ರಾಜಕಾರಣದ ಭವಿಷ್ಯ ಏನಾಗಲಿದೆ..!!!
ಸಮ್ಮಿಶ್ರ ಸರ್ಕಾರ ಸದ್ಯ ಅತಂತ್ರ ಸ್ಥಿತಿಯಲ್ಲಿ ಇದೆ.. ಸದ್ಯ ದೋಸ್ತಿಯ ಅತೃಪ್ತ ಶಾಸಕರು ಒಬ್ಬರಾದ ಮೇಲೆ ಒಬ್ಬರು ಪೈಪೋಟಿಗಿಳಿದಂತೆ ರಾಜೀನಾಮೆ ನೀಡಿದ್ದಾರೆ. ದೋಸ್ತಿ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ. ಅದರ ಮೇಲೆ ಮೈತ್ರಿ ಸರ್ಕಾರದ ಭವಿಷ್ಯ ನಿರ್ಧಾರವಾಗಲಿದೆ.
ನೆನ್ನೆಯಷ್ಟೆ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ನೇತೃತ್ವದ ತ್ರಿಸದಸ್ಯ ಪೀಠ ಇಂದು ಬೆಳಗ್ಗೆ 10.30 ಕ್ಕೆ ತೀರ್ಪು ಪ್ರಕಟವಾಗಲಿದೆ.. ನಾಳೆ ವಿಶ್ವಾಸ ಮತಯಾಚನೆ ನಡೆಯುತ್ತದೆ. ಆದರೆ ಅದಕ್ಕೂ ಮೊದಲು ರಾಜೀನಾಮೆ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ಸ್ಪೀಕರ್ ಗೆ ಸೂಚಿಸಿದರೆ ಬಿಜೆಪಿಗೆ ಲಾಭವಾಗಲಿದೆ. ಸ್ಪೀಕರ್ ರಾಜೀನಾಮೆ ಅಂಗೀಕರಿಸಿದರೂ, ಶಾಸಕರನ್ನು ಅನರ್ಹಗೊಳಿಸಿದರೂ ಸರ್ಕಾರ ಪತನ ಪಕ್ಕಾ ಆಗಲಿದೆ ಎಂದು ಹೇಳಲಾಗುತ್ತಿದೆ. ಅಷ್ಟೆ ಅಲ್ಲದೆ ರಾಜೀನಾಮೆ ಅಂಗೀಕಾರ ಅಥವಾ ತಿರಸ್ಕಾರದ ತೀರ್ಮಾನವನ್ನು ಸ್ಪೀಕರ್ ವಿವೇಚನೆಗೆ ಬಿಟ್ಟರೆ, ರಾಜೀನಾಮೆ ನೀಡಿದ ಶಾಸಕರಿಗೆ ವಿಪ್ ಅನ್ವಯವಾಗಲಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಅನುಕೂಲವಾಗಲಿದೆ. ಅನರ್ಹತೆ ಅಸ್ತ್ರ ಬಳಸಿ ಅತೃಪ್ತ ಶಾಸಕರನ್ನು ನೆರವಾಗಲಿದೆ ಎಂದು ಕಾಂಗ್ರೆಸ್ ವಿಶ್ವಾಸದಲ್ಲಿದೆ.ಒಟ್ಟಾರೆಯಾಗಿ ಇಂದು ಹೊರಬರುವ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ರಾಜ್ಯ ರಾಜಕಾರಣದ ಭವಿಷ್ಯ ನಿಂತಿದೆ ಎನ್ನಬಹುದು.




Comments