ಮೈತ್ರಿಗೆ ಗಾಯದ ಮೇಲೆ ಬರೆ..!! ವಿಶ್ವಾಸಮತ ಯಾಚನೆಗೆ ಬರಲ್ವಂತೆ ಈ ಕೈ ಶಾಸಕ.!!!

17 Jul 2019 11:02 AM | Politics
2355 Report

ಸಮ್ಮಿಶ್ರ ಸರ್ಕಾರ ಸದ್ಯ ಅತೃಪ್ತ ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಈಗಾಗಲೇ ದೋಸ್ತಿಗೆ ಶಾಸಕರು ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ನಾಳೆ ವಿಶ್ವಾಸ ಮತಯಾಚನೆ ಇದೆ… ಇದೇ ಹಿನ್ನಲೆಯಲ್ಲಿ ಇದೀಗ ಮತ್ತೊಂದು ಶಾಕ್ ದೋಸ್ತಿಗೆ ಎದುರಾಗಿದೆ. ಸಿಎಂ ಕುಮಾರಸ್ವಾಮಿಯವರು ಮತಯಾಚನೆ ಮಾಡುವ ಸಮಯದಲ್ಲಿ ಸದನಕ್ಕೆ ಹಾಜರಾಗಲೂ ಸಾಧ್ಯವಿಲ್ಲ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ತಿಳಿಸಿದ್ದಾರೆ.

ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರು ದೋಸ್ತಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದ್ದು, ಸಿಎಂ ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ವೇಳೆ ಸದನಕ್ಕೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.  ಎದೆಯ ನೋವಿನಿಂದ ಬಳಲುತ್ತಿರುವ ನಾಗೇಂದ್ರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ಆಪರೇಷನ್ ಇರುವುದರಿಂದ ಸಿಎಂ ಕುಮಾರಸ್ವಾಮಿ ನಾಳೆ 11 ಗಂಟೆಗೆ ವಿಶ್ವಾಸಮತ ಯಾಚನೆ ವೇಳೆ ಸದನಕ್ಕೆ ಆಗಮಿಸಲು ಸಾಧ್ಯವಿಲ್ಲ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ತಿಳಿಸಿದ್ದಾರೆ. ವಿಶ್ವಾಸ ಮತಯಾಚನೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿಕೊಂಡಿದ್ದರು.

Edited By

Manjula M

Reported By

Manjula M

Comments