ಡಿಕೆ ಶಿವಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಮಹಿಳಾ ಅಧಿಕಾರಿ..!!
ದೋಸ್ತಿಯ ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮುಂಬೈ ರೆಸಾರ್ಟ್ ಗೆ ಹೋಗಿದ್ದಾರೆ. ಅವರನ್ನು ಮನವೊಲಿಸಲು ಪ್ರಯತ್ನವನ್ನು ಸಚಿವ ಡಿಕೆ ಶಿವಕುಮಾರ್ ಮಾಡಿದ್ದಾದ್ದರೂ ಯಾವುದು ಫಲ ನೀಡಿಲಿಲ್ಲ.. ಅತೃಪ್ತ ಶಾಸಕರ ರಾಜೀನಾಮೆ ಅಂಗಿಕಾರ ವಿಚಾರವನ್ನು ಸುಪ್ರೀಂ ಕೋರ್ಟ್ ಸ್ಪೀಕರ್ ಗೆ ನಿರ್ಧಾರಕ್ಕೆ ಬಿಟ್ಟಿದೆ.. ದೋಸ್ತಿಗಳು ಇಂದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಆದರೆ ಇದೀಗ ಇದೇ ಹಿನ್ನಲೆಯಲ್ಲಿ ಕಾಂಗ್ರೆಸ್ ನ ಇಬ್ಬರ ಶಾಸಕರು ರಾತ್ರೋ ರಾತ್ರಿ ಕಣ್ಮರೆಯಾಗಿದ್ದಾರೆ.
ಅಷ್ಟೆ ಅಲ್ಲದೆ ಸಚಿವ ಡಿ.ಕೆ. ಶಿವಕುಮಾರ್ ಮತ್ತು ರಾಜೀನಾಮೆ ನೀಡಿ ಮುಂಬೈಗೆ ಹೋಗಿರುವ ಶಾಸಕರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಮಹಿಳಾ ಅಧಿಕಾರಿಯೊಬ್ಬರು ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ದೇವಿಕಾ ಅವಹೇಳನಹಾರಿ ಪೋಸ್ಟ್ ಹಾಕಿದ್ದು, ಇದನ್ನು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಒಳಗೊಂಡಿರುವ ವಾಟ್ಸಾಪ್ ಗ್ರೂಪಿನಲ್ಲಿ ಹಾಕಿ ಬಿಟ್ಟಿದ್ದಾರೆ. . ಇದನ್ನು ನೋಡಿದವರು ದೇವಿಕಾ ಅವರನ್ನು ಸಖತ್ತಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್ಲರೂ ಬೈಯುತ್ತಿದ್ದಂತೆ ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿರುವ ದೇವಿಕಾ, ಇದನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದೀಗ ಆ ಅವಹೇಳನಕಾರಿ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
Comments