ಸಿಎಂ BSY,  ದೇವೇಗೌಡರಿಗೆ, ಹೆಚ್.ಡಿ.ಕೆ., ಸಿದ್ಧರಾಮಯ್ಯರಿಗೆ ಕೃತಜ್ಞತೆ ಸಲ್ಲಿಸಿದ್ದೇಕೆ..?

12 Aug 2019 12:01 PM | Politics
972 Report

ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪನವರು ಆಯ್ಮೆಯಾಗಿ ಹದಿನೈದು ದಿನಗಳು ಕಳೆಯುತ್ತಿವೆ.. ಇದೇ ಸಂದರ್ಭದಲ್ಲಿಯೇ ಉತ್ತರ ಕರ್ನಾಟಕದಲ್ಲಿ ನೆರೆ ಬಂದಿರುವುದು ಯಡಿಯೂರಪ್ಪನವರಿಗೆ ಸವಾಲಾಗಿದೆ.ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಯಾವ ರೀತಿ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂಬುದು ಬಹಳ ಕುತೂಹಲಕಾರಿ ವಿಷಯ.. ಇದೀಗ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನೆರೆ ಪ್ರದೇಶ ವೀಕ್ಷಣೆ ಮಾಡಲಿರುವ ಅವರು ಬಳಿಕ ಧರ್ಮಸ್ಥಳಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಬೆಳಿಗ್ಗೆ 11.30ಕ್ಕೆ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿರುವ ಬೆಳ್ತಂಗಡಿ, ಬಂಟ್ವಾಳ, ಸುಳ್ಯ ತಾಲ್ಲೂಕುಗಳಲ್ಲಿ ನೆರೆ ವೀಕ್ಷಣೆ ಮಾಡಿ ಧರ್ಮಸ್ಥಳಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಂಜೆ ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ನಾಳೆ ಶಿವಮೊಗ್ಗ, ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ , ನೆರೆಹಾನಿಯಿಂದ ಅಪಾರ ನಷ್ಟವಾಗಿದ್ದು, ಕೇಂದ್ರದಿಂದ ಹೆಚ್ಚಿನ ಪರಿಹಾರಕ್ಕೆ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಒತ್ತಾಯಿಸಿ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ತಿಳಿಸಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.. ದೇವರ ದಯೆಯಿಂದ ನಿನ್ನೆಯಿಂದ ಮಳೆ ಕಡಿಮೆಯಾಗಿದೆ. 4 -5 ದಿನ ಇದ್ದ ಭಯದ ವಾತಾವರಣ ದೂರವಾಗಿದೆ. ಮಳೆ, ಪ್ರವಾಹ ಇಳಿಮುಖವಾಗಿದೆ ಎಂದು ಹೇಳಿದ್ದಾರೆ. ಮಳೆಯಿಂದಾಗಿ ಸಾಕಷ್ಟು ನಷ್ಟವಾಗಿದೆ.. ಸಾಕಷ್ಟು ಕುಟುಂಬಗಳು ಬೀದಿ ಪಾಲಾಗಿವೆ.. ಹಳ್ಳಿಗಳೆಲ್ಲಾ ಜಲಾವೃತಗೊಂಡಿವೆ.. ಇದರಿಂದ ಅಲ್ಲಿನ ವಾಸಿಗಳು ಪರದಾಡುವಂತಾಗಿದೆ.. ಒಟ್ಟಿನಲ್ಲಿ ರಾಜ್ಯ ಸರ್ಕಾರ ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ.. ನಿರಾಶ್ರಿತರಿಗೆ ಬೇಕಾದ ಸವಲತ್ತುಗಳನ್ನು ಒದಗಿಸಬೇಕಾಗಿದೆ.

Edited By

Manjula M

Reported By

Manjula M

Comments