ಸಚಿವ ಸಂಪುಟ ಹಿನ್ನಲೆಯಲ್ಲಿಯೇ CM BSY ಗೆ ಶುರುವಾಯ್ತು ಹೊಸ ಟೆನ್ಷನ್…!!!

16 Aug 2019 10:35 AM | Politics
981 Report

ರಾಜ್ಯದಲ್ಲಿ ಇಷ್ಟೊತ್ತಿಗಾಗಲೇ ನೂತನ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆಗಬೇಕಿತ್ತು.. ಆದರೆ ಉತ್ತರ ಕರ್ನಾಟಕದಲ್ಲಿ  ನೆರೆ ಬಂದ ಪರಿಣಾಮ ಸಚಿವ ಸಂಪುಟ ವಿಸ್ತರಣೆ ಇನ್ನೂ ಆಗಿಲ್ಲ… ಇದೀಗ ಸಚಿವ ಸಂಪುಟ ವಿಸ್ತರಣೆಗೆ ಮೂಹೂರ್ತ ಫಿಕ್ಸ್ ಆಗಿದ್ದು ಸಿಎಂ ಯಡಿಯೂರಪ್ಪನವರಿಗೆ ಹೊಸ ಟೆನ್ಷನ್ ಶುರುವಾಗಿದೆ ಎಂದು ಹೇಳಲಾಗುತ್ತಿದೆ.. ರಾಜ್ಯದ ಸಚಿವ ಸಂಪುಟ ರಚನೆ ವಿಚಾರವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನಿನ್ನೆ ರಾತ್ರಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೀಗ ಸಿಎಂಗೆ ಹೊಸ ಟೆನ್ಷನ್ ಶುರುವಾಗಿದೆ.

ಈಗಾಗಲೇ ಸಚಿವ ಸಂಪುಟದ ಬಗ್ಗೆ ಸಾಕಷ್ಟು ಯೋಚನೆ ಮಾಡಿ ಯಾರಿಗೆ ಯಾವ ಸ್ಥಾನ ನೀಡಬೇಕು ಎಂಬ ತೀರ್ಮಾನಕ್ಕೆ ಬಂದಿದ್ದರೂ ಕೂಡ ಮತ್ತೊಂದು ಟೆನ್ಷನ್ ಯಡಿಯೂರಪ್ಪನವರನ್ನು ಕಾಡುತ್ತಿದೆ.  ಸಂಪುಟ ರಚನೆಗೆ ಸಜ್ಜಾಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಲಿಂಗಾಯತ ಶಾಸಕರ ಟೆನ್ಷನ್ ಶುರುವಾಗಿವೆ. 38 ಬಿಜೆಪಿ ಲಿಂಗಾಯತ ಶಾಸಕರಲ್ಲಿ ಯಾರಿಗೆ ಮಂತ್ರಿಗಿರಿ ಸಿಗುತ್ತದೆ ಎಂಬುದೇ ಸದ್ಯದ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯಲ್ಲಿ ಲಿಂಗಾಯತ ಶಾಸಕರ ಸಂಖ್ಯೆ ಹೆಚ್ಚಾಗಿದ್ದು, ಸಚಿವ ಸ್ಥಾನ ಯಾರಿಗೆ ಕೊಡಬೇಕು ಎಂಬ ಗೊಂದಲಿದ್ದಾರೆ ಎಂದು ಹೇಳಲಾಗುತ್ತಿದೆ. 38 ಲಿಂಗಾಯತ ಶಾಸಕರ ಪೈಕಿ 12 ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.. ಸಚಿವ ಸ್ಥಾನವನ್ನು ಯಾರಿಗೆ ಕೊಡಬೇಕು ಎಂಬುದೆ ಯಕ್ಷ ಪ್ರಶ್ನೆಯಾಗಿಬಿಟ್ಟಿದೆ.. ಇದರಿಂದ ಮತ್ತೆ ರಾಜಖಿಯ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ಮೂಡಿದರೂ ತಪ್ಪಿಲ್ಲ… ಇದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments