ಬಿಎಸ್ ವೈ ಸರ್ಕಾರದಿಂದ ಅನ್ನಭಾಗ್ಯ ಯೋಜನೆ ಗೆ ಬೀಳುತ್ತಾ ಕತ್ತರಿ..!

16 Aug 2019 3:08 PM | Politics
359 Report

ದೋಸ್ತಿ ಸರ್ಕಾರ ಪತನವಾದ ಮೇಲೆ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರು ನಂಟು ಎಷ್ಟರ ಮಟ್ಟಿಗೆ ಸರಿಯಿದ್ಯೋ ಗೊತ್ತಿಲ್ಲ..  ಆದರೆ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದರು.. ಆದರೆ ಅದರಲ್ಲೊಂದು ಜೋಜನೆಗೆ ಕತ್ತರಿ ಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ..  ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕುವ ಚಿಂತನೆಯನ್ನು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ..

ಸದ್ಯ ಬಿಜೆಪಿ ಅಧಿಕಾರಕ್ಕೆ ಬಂದಿದೆ.  ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಕೇಂದ್ರ ಸರ್ಕಾರದ 6 ಸಾವಿರ ರೂ.ಗೆ ರಾಜ್ಯ ಸರ್ಕಾರದ 4 ಸಾವಿರ ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡಲು ಸಿಎಂ ಘೋಷಣೆ ಮಾಡಿದ್ದರು. ಈ ಘೋಷಣೆಯಿಂದ ಸರ್ಕಾರಕ್ಕೆ 2200 ರೂಪಾಯಿ ಹೆಚ್ಚುವರಿ ಆರ್ಥಿಕ ಎದುರಾಗಲಿದೆ ಎನ್ನಲಾಗುತ್ತಿದೆ..  ಕಿಸಾನ್ ಸಮ್ಮಾನ್ ಯೋಜನೆಗಾಗಿ ಸದ್ಯ ಹೀಗಿರುವಾಗ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಆರ್ಥಿಕ ಇಲಾಖೆ ಸಲಹೆ ನೀಡಿದ್ದು, ಅನ್ನಭಾಗ್ಯದಲ್ಲಿ ನೀಡುತ್ತಿರುವ 2 ಕೆಜಿ ಅಕ್ಕಿ ಹಾಗೂ 1 ಕೆಜಿ ಬೇಳೆ ಕಡಿತ ಮಾಡಿದರೆ ಸುಮಾರು 500 ಕೋಟಿ ರೂ. ಹಣ ಇಲಾಖೆಗೆ ಉಳಿತಾಯವಾಗಲಿದೆ ಎಂಬ ಸಲಹೆ ಮೇರೆಗೆ ಸರ್ಕಾರ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆಯಾಗಿ ಒಂದೊಂದು ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಕೂಡ ಒಂದೊಂದು ರೀತಿಯ ಬದಲಾವಣೆಗಳು ಆಗುತ್ತಿರುತ್ತವೆ… ಮುಂದೆ ಸರ್ಕಾರದ ಯಾವ ಯಾವ ಯೋಜನೆಗಳು ಕಡಿತಗೊಳ್ಳುತ್ತವೆಯೋ ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments