ಜಗದೀಶ್ ಶೆಟ್ಟರ್’ಗೆ ಖಾತೆ ನೀಡೋಕೆ ಹಿಂದೇಟು ಹಾಕ್ತಿದ್ದಾರಾ ಯಡಿಯೂರಪ್ಪ..?
ಸದ್ಯ ರಾಜ್ಯ ರಾಜಕೀಯದಲ್ಲಿ ಒಂದಷ್ಟು ಗೊಂದಲಗಳು ಸೃಷ್ಟಿಯಾಗುತ್ತಿವೆ.. ಬಿಎಸ್ ವೈ ಅಧಿಕಾರಕ್ಕೆ ಬಂದು ಒಂದು ತಿಂಗಳು ಆಗುತ್ತಾ ಬರುತ್ತಿದೆ.. ಆದರೆ ಇನ್ನೂ ಸಚಿವ ಸಂಪುಟ ರಚನೆಯಾಗಿಲ್ಲ. ಇಷ್ಟೊತ್ತಿಗಾಗಲೇ ಸಚಿವ ಸಂಪುಟ ರಚನೆಯಾಗಬೇಕಿತ್ತು.. ಉತ್ತರ ಕರ್ನಾಟಕದಲ್ಲಿ ನೆರೆ ಬಂದ ಕಾರಣ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಲಾಯಿತು… ಕಳೆದ ಬಾರಿ ಈ ವಿಷಯದ ಬಗ್ಗೆ ಚರ್ಚೆ ಮಾಡಲು ಮುಖ್ಯಮಂತ್ರಿ ಬಿಎಸ್ ವೈ ದೆಹಲಿ ಗೆ ಹೋಗಿದ್ದಾಗ ಅಲ್ಲಿ ಅಮಿತ್ ಶಾ ಅವರಿಗೆ ಸಿಕ್ಕಿರಲಿಲ್ಲ… ಈ ನಡೆವೆ ಅನೇಕರು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ..
ಹೌದು... ಈ ನಡುವೆ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ನಾಯಕರೂ ದೆಹಲಿಯಲ್ಲೇ ಬೀಡುಬಿಟ್ಟಿದ್ದು, ಅದರಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಸಂಪುಟ ಸ್ಥಾನ ಡೌಟ್ ಎನ್ನಲಾಗ್ತಿದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಬಿಎಸ್‌ವೈ ಸಂಪುಟ ಸೇರಲು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತುದಿಗಾಲಿನಲ್ಲಿ ನಿಂತಿದ್ದು, ಹೇಗಾದರೂ ಸರಿ ಬಿಎಸ್‌ವೈ ಸಂಪುಟ ಸೇರಲು ತೀವ್ರ ಲಾಬಿ ಮಾಡುತ್ತಿದ್ದಾರೆ. ಆದ್ರೆ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಬಿ.ಎಸ್ ಯಡಿಯೂರಪ್ಪ ಕೂಡ ಸಚಿವ ಸ್ಥಾನ ನೀಡಲು ಮನಸ್ಸಿಲ್ಲ. ಹಾಗಾಗಿ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಅಂತಿಮ ಹಂತದ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ ಹಿರಿತನ ಪರಿಗಣಿಸಿ ಮಂತ್ರಿ ಸ್ಥಾನ ನೀಡುವಂತೆ ವರಿಷ್ಠರ ಮೇಲೆ ಒತ್ತಡ ಏರಿದರೂ ಯಾವುದೇ ಭರವಸೆ ಸಿಗುತ್ತಿಲ್ಲ. ಹೀಗಾಗಿ ಜಗದೀಶ್ ಶೆಟ್ಟರ್‌ಗೆ ಮಂತ್ರಿ ಸ್ಥಾನ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ.. ಒಟ್ಟಾರೆಯಾಗಿ ಸಚಿವ ಸ್ಥಾನಗಳು ನಿರ್ಧಾರವಾದ ಮೇಲೆ ರಾಜಕಾರಣದಲ್ಲಿ ಇನ್ನೆಷ್ಟು ಬದಲಾವಣೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
Comments