ಸಂಸದೆ ಸುಮಲತಾರಿಂದ ಹೊಸ ಜಾಗೃತಿ..!! ಏನ್ ಗೊತ್ತಾ..?

19 Aug 2019 2:28 PM | Politics
900 Report

ಮಂಡ್ಯ ಲೋಕಸಭಾ ಅಖಾಡದಿಂದ ಗೆದ್ದು ಸಂಸದೆಯಾಗಿರುವ ಸುಮಲತಾ ಅಂಬರೀಶ್ ಇದೀಗ ಜನರಲ್ಲಿ ಜಾಗೃತಿ ಮೂಡಿಸಲು ಮತ್ತೊಂದು ಹೊಸ ಅಭಿಯಾನ ಶುರುಮಾಡಿಕೊಂಡಿದ್ದಾರೆ.. ಸಂಸದೆಯಾದ ನಂತರ ಸುಮಲತಾ ಅಂಬರೀಶ್ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.. ಸಂಸದೆಯಾದ ಬಳಿಕ ಸುಮಲತಾ ಅವರು ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಅಲ್ಲಿ ಹಾರ, ಶಾಲು, ಪೇಟ ತೊಡಿಸಬೇಡಿ. ಬದಲಾಗಿ ಗಿಡ ನೆಡಿ ಎಂದು ಜನರಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ..

ಮಾಧ್ಯಮದವರೊಂದಿಗೆ ಮಾತನಾಡಿ ನೂತನ ಸಂಸದೆ ಸುಮಲತಾ ಅಧಿವೇಶನದ ನಂತರ ಎಲ್ಲಾ ಕ್ಷೇತ್ರಗಳಿಗೂ ಕೂಡ ಭೇಟಿಯನ್ನು ನೀಡುತ್ತಿದ್ದೇನೆ. ಮಳವಳ್ಳಿ, ಶ್ರೀರಂಗಪಟ್ಟಣ, ಮದ್ದೂರು, ಕೆ.ಆರ್ ನಗರ, ಮಂಡ್ಯ ಹೀಗೆ ಎಲ್ಲಾ ತಾಲೂಕುಗಳಿಗೂ ಹೋಗುತ್ತಿದ್ದೇನೆ. ಜನ ತುಂಬಾ ಪ್ರೀತಿಯಿಂದ ನನ್ನನ್ನು ಸ್ವಾಗತಿಸುತ್ತಿದ್ದಾರೆ ಎಂದು ತಿಳಿಸಿದರು. ಅಷ್ಟೆ ಅಲ್ಲದೆಜನ ಪ್ರೀತಿಯಿಂದ ಹೂವಿನ ಹಾರ, ಶಾಲು, ಪೇಟ ತೆಗೆದುಕೊಂಡು ಬಂದು ಸನ್ಮಾನ ಮಾಡುತ್ತಾರೆ. ಈ ಮೂಲಕ ಅವರು ನನ್ನ ಮೇಲೆ ಪ್ರೀತಿ ತೋರಿಸುತ್ತಿದ್ದಾರೆ. ಆದರೆ ನಿಜಕ್ಕೂ ಅದು ನನಗೆ ಬೇಡ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ಪ್ರೀತಿಯನ್ನು ತೋರಿಸಿಕೊಳ್ಳುವುದಕ್ಕೆ ಅವರು ಎಲ್ಲಿಯಾದರೂ ಒಂದು ಸಸಿ ನೆಟ್ಟು ಆ ಫೋಟೋ ನನಗೆ ಕಳುಹಿಸಿದರೆ ಅವರ ಹೆಸರು ಹಾಕಿ ನನ್ನ ಫೇಸ್ ಬುಕ್ ಪೇಜಿನಲ್ಲಿ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ. ಸ್ವಾಭಿಮಾನಿ ಹೆಸರಲ್ಲಿ ಗೆದ್ದ ಸುಮಲತಾ ಈ ರೀತಿಯ ಕೆಲಸಗಳಿಂದ ಜನ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ.

Edited By

Manjula M

Reported By

Manjula M

Comments