ಸಚಿವ ಸಂಪುಟದ ಬೆನ್ನಲ್ಲೆ ಬಿಎಸ್ ವೈ ಗೆ ಬಿಗ್ ಶಾಕ್..!!

21 Aug 2019 9:50 AM | Politics
1039 Report

ಇಷ್ಟು ದಿನ ಕುತೂಹಲದಿಂದ ಕಾಯುತ್ತಿದ್ದ ಸಚಿವ ಸಂಪುಟಕ್ಕೆ ನೆನ್ನೆಯಷ್ಟೆ ತೆರೆಬಿದಿದ್ದೆ… ಕೆಲವರಿಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಖುಷಿಯಲ್ಲಿದ್ದರೆ, ಮತ್ತೆ ಕೆಲವರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.. ಇದರ ಬೆನ್ನಲೇ ಇದೀಗ  ಸಿಎಂ ಯಡಿಯೂರಪ್ಪ ಅವರಿಗೆ ಬಿಗ್ ಶಾಕ್ ನೀಡಿದ್ದಾರೆ. ಬಹುತೇಕ ವರಿಷ್ಠರ ತೀರ್ಮಾನದಂತೆಯೇ ಸಚಿವರನ್ನು ಆಯ್ಕೆ ಮಾಡಲಾಗಿದೆ..

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಮೂಲಕ ಯಡಿಯೂರಪ್ಪ ಕೈ ಮೇಲಾಗದಂತೆ ನೋಡಿಕೊಳ್ಳಲಾಗಿದೆ. ಅರವಿಂದ ಲಿಂಬಾವಳಿಯವರಿಗೆ ರಾಜ್ಯಾಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದು, ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ..ಯಡಿಯೂರಪ್ಪ ಪರ್ಯಾಯ ಯೋಚನೆ ಮಾಡುವ ಮೊದಲೇ ನಳಿನ್ ಕುಮಾರ್ ಕಟೀಲ್ ಅವರನ್ನು ವರಿಷ್ಠರು ನೇಮಕಗೊಳಿಸಿದ್ದಾರೆ. ಈ ಮೂಲಕ ಯಡಿಯೂರಪ್ಪರಿಗೆ ವರಿಷ್ಠರು ಬಿಗ್ ಶಾಕ್ ಕೊಟ್ಟಿದ್ದಾರೆ ಎನ್ನಲಾಗಿದೆ..ಒಟ್ಟಿನಲ್ಲಿ ರಾಜಕಾರಣದಲ್ಲಿ ಯಾವೆಲ್ಲ ರೀತಿಯ ಬದಲಾವಣೆಗಳು ಆಗುತ್ತವೆ ಎಂಬುದನ್ನು ಮುಂಬರುವ ದಿನಗಳಲ್ಲಿ ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments