ಹಾಗಾದ್ರೆ ಉಪ ಮುಖ್ಯಮಂತ್ರಿ ಹುದ್ದೆ ಇವರಿಗೇನಾ…?

21 Aug 2019 11:18 AM | Politics
807 Report

ಸದ್ಯ ರಾಜ್ಯ ರಾಜಕೀಯದಲ್ಲಿ ಬಿಎಸ್ ವೈ ಸಚಿವ ಸಂಪುಟ  ವಿಸ್ತರಣೆಯಾಗಿದೆ.. ನೆನ್ನೆಯಷ್ಟೆ 17 ಜನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕೆಲವರು ಸಚಿವ ಸ್ಥಾನ ಸಿಕ್ಕಿದ್ದಾಗಿ ಖುಷಿ ಪಟ್ಟರೆ ಮತ್ತೆ ಕೆಲವರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.  ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಚಿವ ಸ್ಥಾನದ ವಂಚಿತರು ಹೊಸ ಹೊಸ ಬೇಡಿಕೆಗಳನ್ನು ಇಡುತ್ತಿದ್ದಾರೆ.

ಬಂಡಾಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಹ ಬೇಡಿಕೆಯನ್ನು ಸಿಎಂ ಮುಂದೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಸಚಿವ ಸ್ಥಾನದಿಂದ ವಂಚಿತರಾದ ಹಿನ್ನೆಲೆಯಲ್ಲಿ ತೀವ್ರ ಬೇಸರಗೊಂಡಿದ್ದು, ಇದೀಗ ಸಿಎಂ ಬಿಎಸ್ ವೈ ಎದುರು ಹೊಸ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ತಮಗೆ ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಅಣ್ಣ ರಮೇಶ್ ಜಾರಕಿಹೊಳಿಗೆ ದೊಡ್ಡ ಹುದ್ದೆ ಮತ್ತು ಪ್ರಭಾವಿ ಖಾತೆ ಕಾಯ್ದಿರಿಸುವಂತೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವ ಸ್ಥಾನ ಸಿಗದಿದ್ದರೆ ಶಾಸಕರು ಯಾವ ರೀತಿಯ ನಿರ್ಣಯಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ರಮೇಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಅಥವಾ ಜಲಸಂಪನ್ಮೂಲ ಖಾತೆಯನ್ನು ನೀಡಿ ಎಂದು ಬಿ.ಎಸ್. ಯಡಿಯೂರಪ್ಪ ಎದುರು ಬಾಲಚಂದ್ರ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.

Edited By

Manjula M

Reported By

Manjula M

Comments