ಅನರ್ಹ ಶಾಸಕರಿಗೆ ಬಿಗ್ ಶಾಕ್..!! ಅವರ ಮುಂದಿನ ನಡೆ..!!!

26 Aug 2019 1:31 PM | Politics
814 Report

ದೋಸ್ತಿಗಳಿಗೆ ಕೈಕೊಟ್ಟು ಮೈತ್ರಿ ಸರ್ಕಾರ ಪತನಗೊಳ್ಳುವುದಕ್ಕೆ ಕಾರಣರಾದ ಅತೃಪ್ತ ಶಾಸಕರು ಸದ್ಯ ಅನರ್ಹರಾಗಿದ್ದಾರೆ.  ಇದೀಗ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ಅನರ್ಹತೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಣೆ ಮಾಡಿದೆ..ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೊಹ್ಟಗಿ, ನ್ಯಾ. ಎನ್.ವಿ. ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ, ಸುಪ್ರೀಂಕೋರ್ಟ್ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ತಿಳಿಸಿದೆ. ಇದೇ ಮೂಲಕ ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ಸಚಿವ ಸ್ಥಾನದ ಕನಸು ಕಂಡಿದ್ದ ಅನರ್ಹ ಶಾಸಕರಿಗೆ ನಿರಾಸೆ ಉಂಟಾಗಿದೆ.

ಅನರ್ಹ ಶಾಸಕರ ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ವಿಚಾರಣೆಗೆ ಬಂದಿಲ್ಲ. ಹೀಗಾಗಿ ಶೀಘ್ರ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ರೊಹ್ಟಗಿ ಮನವಿ ಮಾಡಿದ್ದರು. ಈಗಾಗಲೇ ಒಮ್ಮೆ ತುರ್ತುವಿಚಾರಣೆ ಮನವಿಮಾಡಿ ಹಿನ್ನೆಡೆ ಅನುಭವಿಸಿದ್ದ ಅನರ್ಹ ಶಾಸಕರಿಗೆ ಇದೀಗ ಮತ್ತೊಮ್ಮೆ ಹಿನ್ನಡೆಯಾಗಿದೆ. ಒಟ್ಟಿನಲ್ಲಿ ದೋಸ್ತಿಗಳಿಗೆ ಕೈಕೊಟ್ಟು ಕೆಟ್ಟವಾ ಎಂಬುವ ಪರಿಸ್ಥಿತಿ ಇದೀಗ ಅನರ್ಹ ಶಾಸಕರಿಗೆ ಬಂದೊದಗಿದೆ..  ಮುಂಬರುವ ದಿನಗಳಲ್ಲಿ ಅನರ್ಹ ಶಾಸಕರ ನಡೆಯೇನು ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments