HDK ಗೆ ಬಿಗ್ ಶಾಕ್..!! ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ..!!!

05 Sep 2019 2:55 PM | Politics
2177 Report

ಮೊನ್ನೆ ಮೊನ್ನೆಯಷ್ಟೆ ಡಿಕೆಶಿ ಇಡಿ ವಶದಲ್ಲಿದ್ದಾರೆ.  ಜಾಮೀನು ಕೂಡ ವಜಾ ಆಗಿದೆ. ಆದ ಕಾರಣ ಸೆ 13 ರವರೆಗೂ ಕೂಡ ಡಿಕೆಶಿ ಇಡಿ ವಶದಲ್ಲಿ ಇರುತ್ತಾರೆ. ಇದೀಗ  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎನ್ನಲಾಗಿದೆ.

2007 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದ ಸಮಯದಲ್ಲಿ  ನಡೆದಿದೆ ಎಂದು ಹೇಳಲಾಗುತ್ತಿದ್ದ ಡಿನೋಟಿಫಿಕೇಷನ್ ಸಂಬಂಧ  ಇದೀಗ ಅ. 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎನ್ನಲಾಗಿದೆ.  ಹಲಗೆ ವಡೇರಹಳ್ಳಿಯ 2 ಎಕೆರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ 2012 ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಇದೀಗ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜಕೀಯ ವಲಯದಲ್ಲಿ ಹೆಚ್ಚು ಬದಲಾವಣೆಗಳು ಆಗುತ್ತಿರುವುದು ಚರ್ಚೆಗೆ ಕಾರಣವಾಗಿದೆ.

Edited By

Manjula M

Reported By

Manjula M

Comments