ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ತಪ್ಪಲ್ಲ..!! ವಿವಾದ ಹೇಳಿಕೆ ನೀಡಿದ ಬಿಜೆಪಿ ನಾಯಕ..!!!
ರಾಜ್ಯ ರಾಜಕೀಯದಲ್ಲಿ ಚುನಾವಣೆಗಳು ಮುಗಿದರೂ ಕೂಡ ಇನ್ನೂ ರಾಜಕೀಯ ವಿಷಯಗಳು ಚರ್ಚೆಯಲ್ಲಿವೆ.. ದೋಸ್ತಿ ಸರ್ಕಾರ ಪತನವಾಗಿ ತಿಂಗಳು ಕಳೆದಿವೆ.. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆಯೂ ಕೂಡ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದವು.. ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಮತ್ತು ಪ್ರತ್ಯಾರೋಪಗಳನ್ನು ಮಾಡುತ್ತಲೇ ಇದ್ದಾರೆ.. ಇದೀಗ ಜೆಸಿ ಮಾಧುಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡುವುದು ದೇಶ ವಿರೋಧಿ ಚಟುವಟಿಕೆ ಅಲ್ಲ ಎಂದು ಹೇಳುವ ಮೂಲಕ ಕಾನೂನು ಮತ್ತು ಸಂಸದೀಯ ವ್ಯವ್ಯಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ವಿವಾದ ಸೃಷ್ಠಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಜೆಸಿ ಮಾಧುಸ್ವಾಮಿ ಅಂದು ಲಕ್ಷ್ಮಣ್ ಸವದಿ ಅವರು ವಿಧಾನಸಭೆಯೊಳಗೆ ಅಶ್ಲೀಲ ಚಿತ್ರ ವೀಕ್ಷಿಸಿದ್ದು ತಪ್ಪು, ಆದರೆ, ಇಂದು ಅವರನ್ನು ಉಪಮುಖ್ಯಮಂತ್ರಿ ಮಾಡಬಾರದು ಎನ್ನುವುದೇಕೆ ಎಂದು ಗೊತ್ತಾಗುತ್ತಿಲ್ಲ, ಇದು ಚರ್ಚೆಯ ವಿಷಯವೇ ಅಲ್ಲ ಎಂದರು. 2012ರಲ್ಲಿ ವಿಧಾನಸಭೆಯೊಳಗೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಆರೋಪದ ಮೇಲೆ ಲಕ್ಷ್ಮಣ್ ಸವದಿ ರಾಜೀನಾಮೆ ನೀಡಿದ್ದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಧುಸ್ವಾಮಿ ಈ ಹೇಳಿಕೆ ನೀಡಿದ್ದಾರೆ. ರಾಜಕೀಯದಲ್ಲಿ ಅವರಿಗೆ ಬೇಕಾದ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಾ ರಾಜಕೀಯದ ದಾರಿ ತಪ್ಪಿಸುತ್ತಿದ್ದಾರೆ.
Comments