ಅನರ್ಹ ಶಾಸಕರಿಗೆ ಗುಡ್ ನ್ಯೂಸ್..!! ಏನ್ ಗೊತ್ತಾ
ಮೈತ್ರಿ ಸರ್ಕಾರ ಪತನವಾಗುವುದಕ್ಕೆ ಅತೃಪ್ತ ಶಾಸಕರೇ ಕಾರಣ… ತಮ್ಮ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾಗಿದ್ದರು.. ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ 17 ಮಂದಿ ಅನರ್ಹಗೊಂಡಿದ್ದರು. ಬಿಜೆಪಿ ಸರ್ಕಾರದಲ್ಲಿ ಯಾವುದೇ ರೀತಿಯ ಸ್ಥಾನಮಾನ ಪಡೆಯಲು ಸಾಧ್ಯವಾಗಿರಲಿಲ್ಲ..
ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹಗೊಳಿಸಿದ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರ ತೀರ್ಮಾನದ ವಿರುದ್ಧ 17 ಮಂದಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.. ತಿಂಗಳುಗಳೇ ಕಳೆಯುತ್ತಾ ಬಂದರೂ ಕೂಡ ತಮ್ಮ ಅರ್ಜಿಯ ವಿಚಾರಣೆ ನಡೆಯದೆ ಇರುವುದರಿಂದ ಶಾಸಕರು ಗಾಬರಿಗೊಂಡಿದ್ದರು. .ಇದೀಗ ಅನರ್ಹ ಶಾಸಕರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ., ಸೆಪ್ಟೆಂಬರ್ 11ರಂದು ಇವರುಗಳ ಅರ್ಜಿಯ ವಿಚಾರಣೆ ನಡೆಯಲು ದಿನಾಂಕ ನಿಗದಿಯಾಗಿದೆ ಎಂದು ತಿಳಿದುಬಂದಿದೆ. ಸದ್ಯ ಅನರ್ಹ ಶಾಸಕರು ನೆಮ್ಮದಿಯಾಗಿದ್ದಾರೆ.
Comments