ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರ್ತಾರಂತೆ ಇವರು..!!

16 Oct 2019 4:26 PM | Politics
388 Report

ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿವೆ.. ದೋಸ್ತಿ ಸರ್ಕಾರ ಪತನವಾದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ದೋಸ್ತಿಗಳಿಗೆ ಕೈಕೊಟ್ಟ ಶಾಸಕರು ಸದ್ಯ ಅತಂತ್ರ ಸ್ಥಿತಿಯಲ್ಲಿದ್ದಾರೆ… ಇದೀಗ ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿದೆ..ಆದರೆ ಇದೇ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ.  ಕಾಂಗ್ರಸ್ ನ ಮತ್ತೊಬ್ಬ ಶಾಸಕ ಕಾಂಗ್ರೆಸ್ ಗೆ ಕೈ ಕೊಡಲು ಸಿದ್ದವಾಗಿದ್ದಾರೆ ಎನ್ನಲಾಗುತ್ತಿದೆ.

ಉಪಚುನಾವಣೆಯ ಸಮಯದಲ್ಲೇ ರಾಜ್ಯ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್ ಕೈಕೊಟ್ಟು ಬಿಜೆಪಿ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.  ಕಳೆದ ಕೆಲ ದಿನಗಳಿಂದ ಅನಿಲ್ ಲಾಡ್ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಇದೀಗ ಅನಿಲ್ ಲಾಡ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಅನಿಲ್ ಲಾಡ್ ಅವರು ತಮ್ಮ ವೈಯಕ್ತಿಕ ಸಮಸ್ಯೆಗಳಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಒಬ್ಬೊಬ್ಬರೆ ಪಕ್ಷ ಬಿಟ್ಟು ಬೇರೆ ಬೇರೆ ಪಕ್ಷಗಳಿಗೆ ಹಾರಲು ಸಿದ್ದವಾಗಿದ್ದಾರೆ ಎನ್ನಲಾಗುತ್ತಿದೆ.

 

Edited By

Manjula M

Reported By

Manjula M

Comments