ಅನರ್ಹ ಶಾಸಕರಿಗೆ ಸಿಗುತ್ತಾ ಬಿಜೆಪಿ ಉಪಚುನಾವಣೆ ಟಿಕೇಟ್..!!! ಯಾರ್ಯಾರಿಗೆ ಗೊತ್ತಾ…?

21 Oct 2019 9:02 AM | Politics
389 Report

ರಾಜ್ಯ ರಾಜಕಾರಣದಲ್ಲಿ ದೋಸ್ತಿ ಸರ್ಕಾರ ಪತನವಾಗಲು ಅನರ್ಹ ಶಾಸಕರೇ ಕಾರಣ ಎಂಬುದು ಎಲ್ಲರಿಗೂ ಕೂಡ ತಿಳಿದೆ ಇದೆ… ತಮಗೆ ಬೇಕಾದ ಸ್ಥಾನಮಾನ ದೋಸ್ತಿ ಸರ್ಕಾರದಲ್ಲಿ ಸಿಗಲಿಲ್ಲ ಎಂದು ರಾಜೀನಾಮೆ ನೀಡಿದರು.. ಆದರೆ ಆ ತೃಪ್ತ ಶಾಸಕರನ್ನು ಕೋರ್ಟ್ ಅನರ್ಹಗೊಳಿಸಿತು.. ಹೀಗಾಗಿ ಅತೃಪ್ತ ಶಾಸಕರು ಅನರ್ಹಗೊಂಡಿದ್ದರು…ಇದೀಗ  ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರದ ರಚನೆಗೆ ಕಾರಣರಾದ ಅನರ್ಹ ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ.

ಅನರ್ಹ ಶಾಸಕರಿಗೆ ಬಿಜೆಪಿ ಟಿಕಟ್ ನೀಡುವ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರನ್ನು ಮನವೊಲಿಸುವ ಪ್ರಯತ್ನವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಮಾಡಿದ್ದಾರೆ. ಅನರ್ಹರ ಸಮ್ಮುಖದಲ್ಲೇ ಸಭೆ ನಡೆಸಿರುವ ಬಿ.ಎಸ್. ಯಡಿಯೂರಪ್ಪ, ರಾಜೀ ಸೂತ್ರ ಸಿದ್ಧಪಡಿಸಿದ್ದಾರೆ ಎನ್ನಲಾಗಿದ್ದು, ದೋಸ್ತಿ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ 17 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಗಿದೆ ಹೀಗಾಗಿ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡಬೇಕು ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಈ ಸುದ್ದಿ ಕೇಳಿದ ಅನರ್ಹ ಶಾಸಕರು ಸ್ವಲ್ಪ ನೆಮ್ಮದಿಯಿಂದ ಇದ್ದಾರೆ. ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೇಟ್ ಸಿಗುತ್ತೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments