ಶಾಸಕಿ ಅನಿತಾ ಕುಮಾರಸ್ವಾಮಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು

11 Dec 2019 4:00 PM | Politics
374 Report

ತಮ್ಮ ಮನವಿಗೆ ಸ್ಪಂದಿಸಲಿಲ್ಲವೆಂಬ ಕಾರಣಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿಗೆ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ರಾಮನಗರದ ನಗರಸಭೆ ಕಾರ್ಯಾಲಯದಲ್ಲಿ ನಡೆದಿದೆ. ಕಾರ್ಯಕರ್ತರು ಹಾಗೂ ಸ್ಥಳೀಯ ಜನರು ಗೋಡೌನ್ ಖಾಲಿ ಮಾಡಿಸುವಂತೆ ಶಾಸಕಿ ಅನಿತಾ ಕುಮಾರಸ್ವಾಮಿಗೆ ಮನವಿ ಸಲ್ಲಿಸಲು ನಗರಸಭೆ ಕಾರ್ಯಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಶಾಸಕಿ ಅನಿತಾ ಕುಮಾರಸ್ವಾಮಿ ಜನರ ಮನವಿಗೆ ಸ್ಪಂದಿಸಿಲ್ಲ ಎನ್ನಲಾಗಿದೆ.

ವಿನಾಯಕನಗರ ರಾಜು ಎಂಬುವರು ಗಲಾಟೆ ಮಾಡಿದ್ದಾರೆ. ಯಾವುದಕ್ಕೂ ಸ್ಪಂದಿಸದ ಕಾರಣ ಅನಿತಾಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ಧಾರೆ.  ಅನಿತಾಕುಮಾರಸ್ವಾಮಿ ಕಾಲಿಗೆ ಬಿದ್ದು, ಕಾರಿನ ಮುಂದೆ ಕುಳಿತು ಆಕ್ರೋಶ ವ್ಯಕ್ತಪಡಿಸಿದ್ಧಾರೆ. ರಾಮನಗರ ಜೆಡಿಎಸ್ ತಾಲೂಕು ಅಧ್ಯಕ್ಷ ರಾಜಶೇಖರ್ ಹಾಗೂ ವಿನಾಯಕನಗರ ರಾಜು ನಡುವೆ ಗಲಾಟೆ ನಡೆದಿದೆ. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೆಡಿಎಸ್ ಕಾರ್ಯಕರ್ತರು, ಮತದಾರರು ಹಾಗೂ ಪೊಲೀಸರ ನಡುವೆ ಗಲಾಟೆ ಉಂಟಾಗಿತ್ತು. ಗಲಾಟೆ ನೋಡಲಾಗದೇ  ಶಾಸಕಿ ಅನಿತಾಕುಮಾರಸ್ವಾಮಿ ಕಾರು ಹತ್ತಿ ಹೊರಟರು.

Edited By

venki swamy

Reported By

venki swamy

Comments