ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಡಿಕೆಶಿ
ಕನಕಪುರದ ಹಾರೋಬೆಲೆಯಲ್ಲಿ ನಿರ್ಮಿಸಲು ಮುಂದಾಗಿರುವ ವಿಶ್ವದ ಎತ್ತರದ ಏಕಶಿಲಾ ಏಸು ಪ್ರತಿಮೆಗೆ ಜಮೀನು ನೀಡಿರುವುದರ ಬಗ್ಗೆ ಬಿಜೆಪಿ ನಾಯಕರು ಹಲವು ಟೀಕೆಗಳನ್ನು ಮಾಡಿದರು. ನಾನು ರಾಮನ ಮಂದಿರಾನೂ ಕಟ್ಟಿದ್ದೀನಿ ಹಾಗೆಯೇ ಮಾರಮ್ಮ ದೇವಸ್ಥಾನವನ್ನೂ ಕಟ್ಟಿಸಿದ್ದೇನೆ. ಆಂಜನೇಯ ಮಂದಿರ ಸೇರಿ ಹತ್ತಾರು ಮಂದಿರಗಳನ್ನು ಕಟ್ಟಿದೀನಿ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರೆ.
ಬಿಜೆಪಿ ನಾಯಕರು ಯಾವಾಗಲೂ ಬೇರೊಬ್ಬರ ವಿಚಾರದಲ್ಲಿ ತಪ್ಪು ಕಂಡು ಹಿಡಿರುವ ಕೆಲಸವನ್ನಷ್ಟೇ ಮಾಡುತ್ತಾರೆ. ಈಗಲೂ ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ ಕಪಾಲ ಬೆಟ್ಟ ತನ್ನದೇ ಆದ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಅಲ್ಲಿನ ಜನರು ನನ್ನ ಪರವಾಗಿ ನಿಂತು ಬೆಳೆಸಿದ್ದಾರೆ. ಇಡೀ ಗ್ರಾಮದ ಜನರು ನನ್ನ ಪರ ಪ್ರಾರ್ಥನೆ ಮಾಡಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಗ್ರಾಮಸ್ಥರು ಮೂರ್ತಿ ನಿರ್ಮಾಣ ಮಾಡುವ ಪ್ರಸ್ತಾಪ ಮಾಡಿದ್ದರು. ಆದರೆ ಈ ಜಾಗ ಸರ್ಕಾರಿ ಸ್ಥಳವಾಗಿದೆ. ಆದ್ದರಿಂದ ಬೇಡ ಎಂದು ಹೇಳಿ ಯಾವುದೇ ತೊಂದರೆ ಇಲ್ಲದೇ ಜಮೀನು ನೀಡುವ ಭರವಸೆ ನೀಡಿದ್ದೆ ಎಂದು ಹೇಳಿದರು.
Comments