ಸರಣಿ ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಕುಮಾರಸ್ವಾಮಿ

27 Apr 2020 1:07 PM | Politics
1050 Report

ಕೊರೋನಾದಿಂದಾಗಿ ದೇಶದ ಆರ್ಥಿಕತೆ ತೀವ್ರವಾಗಿ ಕುಸಿದಿದ್ದು ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ, ಹಸಿವು-ನಿರುದ್ಯೋಗ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಈ ಕುರಿತು ಆರ್ಗೋಪಾಯಗಳನ್ನು ಹುಡುಕಬೇಕು. ಜನ ಸಾಮಾನ್ಯರಿಗೆ ಹಣ ಉಳಿಸುವ ಮಾರ್ಗಗಳನ್ನ ಸರ್ಕಾರ ಹುಡುಕಬೇಕು ಈ ಕುರಿತು ಸರಣಿ ಟ್ವೀಟ್ ಮಡುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

 “ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ‘ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರ್ಕಾರಗಳ ಆದ್ಯತೆ ಆಗಲಿದೆ” ಎಂದಿದ್ದಾರೆ.

 "ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ" ಎಂದು ಒತ್ತಾಯಿಸಿದ್ದಾರೆ.

ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ. ಹೀಗಾಗಿ ಸರ್ಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗಿರುವುದರಿಂದ ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆಯನ್ನು ಸಂಗ್ರಹಿಸಲಿ” ಎಂದಿದ್ದಾರೆ.

Edited By

venki swamy

Reported By

venki swamy

Comments