ಚರ್ಮ ಕುಶಲ ಕರ್ಮಿಗಳಿಗೆ ರಾಜ್ಯ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ

08 May 2020 11:13 AM | Politics
430 Report

ಕೋವಿಡ್ 19ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆಬದಿಯಲ್ಲಿ ಚರ್ಮ ವೃತ್ತಿಯಲ್ಲಿ ತೊಡಗಿ ಜೀವನೋಪಾಯಕ್ಕೆ ತೊಂದರೆಯಾಗಿರುವ ಚರ್ಮ ಕುಶಲಕರ್ಮಿಗಳಿಗೆ ( ಕುಲಕಸುಬು) ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಣೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ರಾಜ್ಯದ 11,722 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ. ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳೀದರು. ಸಿಎಂ ಬಿ.ಎಸ್. ಯಡಿಯೂರಪ್ಪ ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಚರ್ಮ ಕುಶಲ ಕರ್ಮಿಗಳ ಜೀವನೋಪಾಯಕ್ಕೆ ನೆರವಾಗಲಿದೆ ಎಂದು ಹೇಳಿದರು.

Edited By

venki swamy

Reported By

venki swamy

Comments