ಏಕದಿನ ಪಂದ್ಯ : ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

21 Sep 2017 3:14 PM | Sports
240 Report

ಏಕದಿನ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಟೀಮ್ ಇಂಡಿಯಾ 2 ನೇ ಪಂದ್ಯವನ್ನು ಕೈವಶ ಮಾಡಿಕೊಳ್ಳುವ ಆತುರದಲ್ಲಿದೆ. ಕೋಲ್ಕತಾ ಈಡನ್ ಗಾರ್ಡನ್ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದ್ದು , ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಳ್ಳುವ ಮೂಲಕ ಕಣಕ್ಕಿಳಿದಿದೆ.

ಇಂದಿನ ಪoದ್ಯಕ್ಕೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೇ ಚೆನ್ನೈ ನಲ್ಲಿ ಆಡಿದ ತಂಡವನ್ನೇ 2ನೇ ಪಂದ್ಯಕ್ಕೂ ಉಳಿಸಿಕೊಳ್ಳಲಾಗಿದೆ.
ಟೀಮ್ ಇಂಡಿಯಾ :
ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ವಿರಾಟ್ ಕೊಹ್ಲಿ (ನಾಯಕ), ಮನೀಶ್ ಪಾಂಡೆ, ಕೇದಾರ್ ಜಾಧವ್, ಎಂ.ಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್, ಕುಲ್ದೀಪ್ ಯಾದವ್, ಯುಜುವೇಂದ್ರ ಚಾಹಲ್, ಜಸ್ಪ್ರಿತ್ ಬುಮ್ರಾ
ಆಸ್ಟ್ರೇಲಿಯಾ ಟೀಮ್ :
ಡೇವಿಡ್ ವಾರ್ನರ್, ಹಿಲ್ಟನ್ ಕಾರ್ಟ್ರೈಟ್, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಅಯಷ್ಟನ್ ಅಗರ್, ಕೇನ್ ರಿಚರ್ಡ್ಸನ್, ಪ್ಯಾಟ್ ಕಮ್ಮಿನ್ಸ್, ನಾಥನ್ ಕಾಲ್ಟರ್-ನೈಲ್

Edited By

Hema Latha

Reported By

Madhu shree

Comments