ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ

07 Feb 2018 5:55 PM | Sports
478 Report

ಇಲ್ಲಿನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಗೆಲುವಿಗಾಗಿ ಉಭಯ ತಂಡಗಳು ಹೋರಾಟ ನಡೆಸುತ್ತಿವೆ. ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಈಗಾಗಲೇ 2-0 ಮುನ್ನಡೆ ಸಾಧಿಸಿದೆ.

ಗಾಯದ ಸಮಸ್ಯೆ: ದಕ್ಷಿಣ ಆಫ್ರಿಕಾ ತಂಡದ ಸದ್ಯದ ಪರಿಸ್ಥಿತಿ ಗಮನಿಸಿದರೆ ಕೊಹ್ಲಿ ಪಡೆಗೆ ಗೆಲುವು ಕಷ್ಟವಾಗಲಾರದು. ಏಕೆಂದರೆ ಆತಿಥೇಯ ತಂಡವೀಗ ಗಾಯದ ಸಮಸ್ಯೆಗೆ ಸಿಲುಕಿದೆ. ಎಬಿ ಡಿವಿಲಿಯರ್ಸ್, ಫಫ್ ಡುಪ್ಲೆಸಿ ಅವರು ಸರಣಿಯಲ್ಲಿ ಆಡುತ್ತಿಲ್ಲ. ಕ್ವಿಂಟನ್ ಡಿಕಾಕ್ ಕೂಡ ಗಾಯಗೊಂಡು ಹೊರಬಿದ್ದಿದ್ದಾರೆ. ಈ ಸಮಸ್ಯೆಗಳ ಜೊತೆಗೆ ಭಾರತದ 'ರಿಸ್ಟ್ ಸ್ಪಿನ್ನರ್'ಗಳಾದ ಯಜುವೇಂದ್ರ ಚಾಹಲ್ ಹಾಗೂ ಕುಲದೀಪ್ ಯಾದವ್ ಅವರು ತಲೆನೋವಾಗಿ ಪರಿಣಮಿಸಿ ದ್ದಾರೆ. ಇವರಿಬ್ಬರು ಮೊದಲ ಎರಡು ಪಂದ್ಯಗಳಲ್ಲಿ 13 ವಿಕೆಟ್ ಹಂಚಿ ಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಕೊಹ್ಲಿ ಅಬ್ಬರ, ಎರಡನೇ ಪಂದ್ಯದಲ್ಲಿ ಸ್ಪಿನ್ನರ್ಗಳ ಕೈಚಳಕಕ್ಕೆ ದಕ್ಷಿಣ ಆಫ್ರಿಕಾ ಶರಣಾಗಿತ್ತು.

ತಂಡ ಇಂತಿವೆ
ಭಾರತ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮ, ಅಜಿಂಕ್ಯ ರಹಾನೆ, ಮಹೇಂದ್ರ ಸಿಂಗ್ ದೋನಿ (ವಿಕೆಟ್ ಕೀಪರ್), ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್.

ದಕ್ಷಿಣ ಆಫ್ರಿಕಾ: ಏಡನ್ ಮರ್ಕರಮ್ (ನಾಯಕ), ಹಾಶೀಮ್ ಆಮ್ಲಾ, ಜೀನ್ ಪಾಲ್ ಡುಮಿನಿ, ಇಮ್ರಾನ್ ತಾಹೀರ್, ಡೇವಿಡ್ ಮಿಲ್ಲರ್, ಮಾರ್ನ್ ಮಾರ್ಕೆಲ್, ಕ್ರಿಸ್ ಮಾರಿಸ್, ಲುಂಗಿ ಗಿಡಿ, ಆಯಂಡಿಲಿ ಪಿಶುವಾಯೊ, ಕಗಿಸೊ ರಬಾಡ, ತಬ್ರೇಜ್ ಶಂಶಿ, ಕೈಯಲ್ ಜೊಂಡೊ, ಫರ್ಹಾನ್ ಬೆಹ್ರದೀನ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್).

Edited By

Shruthi G

Reported By

Madhu shree

Comments