ಮೊದಲ ದಿನವೇ ಅಪರೂಪದ ದಾಖಲೆ ಮಾಡಿದ ಆರ್ ಅಶ್ವಿನ್

ಇಂಗ್ಲೆಂಡ್ ವಿರುದ್ಧ ಆರಂಭವಾದ ಮೊದಲ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾದ ಅಶ್ವಿನ್ ಇಂಗ್ಲೆಂಡ್ ತಂಡದ ಕುಕ್, ಬೆನ್ ಸ್ಟೋಕ್ಸ್, ಜೊಸ್ ಬಟ್ಲರ್, ಸ್ಟುವರ್ಟ್ ಬ್ರಾಡ್ ರನ್ನು ಔಟ್ ಮಾಡುವ ಮೂಲಕ ನಾಲ್ಕು ವಿಕೆಟ್’ಗಳನ್ನು ಪಡೆದರು.
ಇಂಗ್ಲೆಂಡ್’ನಲ್ಲಿ ನಡೆದ ಟೆಸ್ಟ್ ಪಂದ್ಯದ ಮೊದಲ ದಿನವೇ 4 ವಿಕೆಟ್ ಪಡೆದ ಮೊದಲ ಟೀಂ ಇಂಡಿಯಾದ ಸ್ಪಿನ್ ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾದರು.. ಅಲ್ಲದೇ ವಿದೇಶಿ ನೆಲದಲ್ಲಿ ಈ ಸಾಧನೆ ಮಾಡಿದ 4ನೇ ಆಟಗಾರ ಎನಿಸಿಕೊಂಡರು. ಈ ಹಿಂದೆ ಟೀಂ ಇಂಡಿಯಾ ಪರ ಸ್ಪಿನ್ನರ್ ಚಂದ್ರಶೇಖರ್ (6/94), ಬಿಷನ್ ಸಿಂಗ್ ಬೇಡಿ (5/55), ಅನಿಲ್ ಕುಂಬ್ಳೆ (5/84) ವಿದೇಶಿ ನೆಲದಲ್ಲಿ ಈ ಸಾಧನೆ ಮಾಡಿದ್ದರು.
Comments